ಬೆಂಗಳೂರು : ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರಕರಣ ಸಂಬಂಧ ಈಗಾಗಲೇ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದು ನಾನೇ ಎಂಬುದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಕಳೆದ ರಾತ್ರಿ ಮಿಡ್ ನೈಟ್ ದಾಳಿ ನಡೆಸಿ, 80ಕ್ಕೂ ಹೆಚ್ಚು ಪುಂಡರನ್ನು ಬಂಧಿಸಿದ್ದರು. ಜೊತೆಗೆ ನಾಗಾವರ ಕಾರ್ಪೊರೇಟರ್ ಪತಿ ಖಲೀಂ ಪಾಷಾ ಅವರನ್ನು ಕೂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, “ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿದೆ. ಕ್ರೌರ್ಯದ ಮನಃಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ ಕಲೀಂಪಾಷರನ್ನುಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೀಚಕರ ಹಡೆಮುರಿಕಟ್ಟುವಲ್ಲಿ ನಮ್ಮಸರ್ಕಾರ ಸಮರ್ಥವಿದೆ. ಕಾಂಗ್ರೆಸ್‌ನವರಿಗೆ ಈಗಲಾದ್ರೂ ನಿಜಸತ್ಯದ ಅರಿವಾಯಿತೇ” ಎಂದು ಪ್ರಶ್ನಿಸಿದ್ದಾರೆ.








