ಚಿಕ್ಕಮಗಳೂರು : ಶಂಕರಾರ್ಯರ ಪುತ್ಥಳಿ ಮೇಲೆ ಮುಸ್ಲಿಂ ಸಂಘಟನೆ ಬಾವುಟ ಹಾರಿಸಿದ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ. 10 ಜನರ ವಿಶೇಷ ಪೊಲೀಸರ ತಂಡ ರಚನೆ ಮಾಡಲಾಗಿದ್ದು, ಈಗಾಗಲೇ ತನಿಖೆ ಆರಂಭವಾಗಿದೆ. ಚಿಕ್ಕಮಗಳೂರು ಹಾಗೂ ಕೊಪ್ಪ ಡಿವೈಎಸ್ಪಿ ನೇತೃತ್ವದ ತಂಡ ಇದಾಗಿದೆ.
ಇನ್ನೂ ಈ ಘಟನೆ ಸಂಬಂಧ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಠದ ಭಕ್ತರು ಹಾಗೂ ಮಾಜಿ ಶಾಸಕ ಜೀವರಾಜ್ ಆಗ್ರಹಿಸಿದ್ರು. ಅದರಂತೆ ಶೃಂಗೇರಿ ಪೊಲೀಸರು ಈಗಾಗಲೇ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇನ್ನೂ ಮುಂದಿನ ತನಿಖೆ ಚುರುಕುಗೊಂಡಿದ್ದು, ವಿಶೇಷ ತಂಡವನ್ನು ಪ್ರಕರಣ ಸಂಬಂಧ ತನಿಖೆಗೆ ರಚಿಸಲಾಗಿದೆ.