ಐಸಿಸಿ ಮಹಿಳಾ ಟಿ-20 ವಿಶ್ವಕಪ್ ನಲ್ಲಿ ಭಾರತ ಮೊದಲ ಬಾರಿಗೆ ಫೈನಲ್ ತಲುಪಿದೆ. ಇಂಗ್ಲೆಂಡ್ ವಿರುದ್ಧ ಇಂದು ನಡೆಯಬೇಕಾಗಿದ್ದ ಸೆಮಿಫೈನಲ್ ಪಂದ್ಯ ಮಳೆಯಿಂದ ರದ್ದಾದ ಕಾರಣ ಅಂಕಗಳ ಆಧಾರದ ಮೇಲೆ ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ. ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಭಾರತ ಆಡಿದ ಎಲ್ಲಾ ಪಂದ್ಯಗಳಲ್ಲಿ ಗೆಲುವಿನ ಕೇಕೆ ಹಾಕಿ ಎ ಗುಂಪಿನಲ್ಲಿ 8 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿತ್ತು. ಇಂಗ್ಲೆಂಡ್ ಬಿ ಗುಂಪಿನಲ್ಲಿ 6 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿತ್ತು.
ಮತ್ತೊಂದೆಡೆ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯವೂ ರದ್ದಾಗುವ ಸಾಧ್ಯತೆಗಳಿದ್ದು, ಆಫ್ರಿಕಾ ಫೈನಲ್ ಪ್ರವೇಶಿಸುವ ಸಾಧ್ಯತೆ ಇದೆ.
ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?
ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...








