ಬೆಂಗಳೂರಿನಲ್ಲಿ ನಡೆದ ಗಲಭೆಗೆ ಮೂಲ ಕಾರಣವಾದ ಫೇಸ್ ಬುಕ್ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ತಲೆ ತಗೆಯಿರಿ ಎಂದು ಕರೆ ನೀಡಿದ್ದ ಉತ್ತರಪ್ರದೇಶ ಮೀರತ್ ನ ರಿಜ್ವಿ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ತಲೆ ತಗೆಯಿರಿ ಎಂದು ಕರೆ ಕೊಟ್ಟಿದ್ದ ಈತ ಸಮಾಜವಾದಿ ಪಕ್ಷದ ಯುವ ಮುಖಂಡ. ಈತ ನವೀನ್ ತಲೆ ತೆಗೆದವರಿಗೆ 51 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ. ಧರ್ಮದ ಆಧಾರದಲ್ಲಿ ಎರಡು ಗುಂಪುಗಳ ನಡುವೆ ಕೋಮು ಕಲಹ ಉಂಟುಮಾಡುವ ಪ್ರಯತ್ನದ ಆರೋಪದಲ್ಲಿ ರಿಜ್ವಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನೂ ಆರೋಪಿ ರಿಜ್ವಿ ಸದ್ಯ ತಲೆಮೆರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಕಾರ್ಯಾಚರಣೆ ನಡೆಯುತ್ತಿದೆ.
ಬಿಜೆಪಿ ಪತನದ ಕಾಲ ಹತ್ತಿರ ಬಂದಿದೆ: ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಒಗ್ಗಟ್ಟಾದ ಇಂಡಿಯಾ ಮೈತ್ರಿಕೂಟ
ನವದೆಹಲಿ: ದೇಶದ ರಾಜಕಾರಣದಲ್ಲಿ ಈಗ ಬದಲಾವಣೆಯ ಗಾಳಿ ಬೀಸುತ್ತಿದೆ ಮತ್ತು ಬಿಜೆಪಿಯ ಅಧಿಪತ್ಯ ಕುಸಿಯುವ ಕಾಲ ಹತ್ತಿರ ಬಂದಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಅವರು ಗುಡುಗಿದ್ದಾರೆ....








