ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಭಾಗ್ಯಲಕ್ಷ್ಮಿ, ಶಾಲಾ ಮಕ್ಕಳಿಗೆ ಸೈಕಲ್ ಸೇರಿದಂತೆ ಪ್ರಮುಖ ಯೋಜನೆಗಳನ್ನು ಮುಂದುವರೆಸಲಾಗುವುದು ಅಂತ ಹೇಳಿದರು. ಕೃಷಿಗಾಗಿ ಹೊಸ ಕೃಷಿ ನೀತಿ ಜಾರಿಗೆ ತರಲಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ 6 ಸಾವಿರ ಜೊತೆಗೆ, ನಮ್ಮ ಸರ್ಕಾರ 4 ಸಾವಿರ ಘೋಷಿಸಿದೆ. ಈವರೆಗೆ 41 ಲಕ್ಷ ಬ್ಯಾಂಕ್ ಖಾತೆಗಳಿಗೆ 825 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಈ ಯೋಜನೆ ಮುಂದುವರೆಸಲು 2600 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಎಲ್ಲಾ ರೈತರಿಗೆ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎನ್ನುವ ಮೂಲಕ, ಸಿಎಂ ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳೇ ಸರ್ಕಾರಕ್ಕೆ ಮುಳುವಾಯಿತೇ?ಡಿಕೆಶಿ ಸರ್ಕಾರಕ್ಕೆ ಸಚಿವ ಬಾಲಕೃಷ್ಣ ಶಾಕ್: ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದು ಅಸಹಾಯಕತೆ
ರಾಮನಗರ: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಈಗ ತನ್ನದೇ ಪಕ್ಷದ ಪ್ರಭಾವಿ ಸಚಿವರಿಂದ ದೊಡ್ಡ ಮುಜುಗರ ಎದುರಾಗಿದೆ. ಸರ್ಕಾರದ ಅತಿ ದೊಡ್ಡ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ...








