ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಇತಿಹಾಸ ಎಂದೂ ಮರೆಯದ ಕ್ರಾಂತಿಕಾರಿ ಯೋಧ ಶಾಹೀದ್ ಮಂಗಲ್ ಪಾಂಡೆಯ ನೆನಪಿಸಿಕೊಂಡು:

admin by admin
August 15, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಇತಿಹಾಸ ಎಂದೂ ಮರೆಯದ ಕ್ರಾಂತಿಕಾರಿ ಯೋಧ ಶಾಹೀದ್ ಮಂಗಲ್ ಪಾಂಡೆಯ ನೆನಪಿಸಿಕೊಂಡು:

ಭಾರತ ಇಂದು ಅಸಂಖ್ಯಾತ ಹೋರಾಟ, ಅಪರಿಮಿತ ತ್ಯಾಗ ಬಲಿದಾನಗಳ ಪರಿಣಾಮವಾಗಿ 74ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಬಲಿದಾನಗಳು, ಹೋರಾಟಗಳು ನಡೆದಿವೆ. ಪ್ರತಿ ಹೋರಾಟವು ಒಂದೊಂದು ಘಟನೆಗಳಿಗೆ ಸಾಕ್ಷಿಯಾಗಿವೆ.

Related posts

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

May 27, 2026
ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

May 27, 2026

ಅನೇಕ ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕಾಗಿ ಹೋರಾಡಿ ತಮ್ಮ ಪ್ರಾಣ ತ್ಯಾಗಗೈದಿದ್ದಾರೆ. ಅವರಲ್ಲಿ ಒಬ್ಬ ಹುತಾತ್ಮ ಯೋಧ ಮಂಗಲ್ ಪಾಂಡೆ.
ಭಾರತದ ಸ್ವಾತಂತ್ರ್ಯ ಹೋರಾಟದ ಮೊದಲ ಸಂಗ್ರಾಮವೆಂದು 1857 ನೇ ಸಿಪಾಯಿದಂಗೆಯನ್ನು ಪರಿಗಣಿಸಲಾಗುತ್ತದೆ. ಇದು ಬ್ರಿಟೀಷರ ವಿರುದ್ಧ ಮೊದಲ ಬಾರಿಗೆ ದೇಶದಾದ್ಯಂತ ಹೋರಾಡಲು ಪ್ರೇರಣೆಯಾಯಿತು.

ವ್ಯಾಪಾರಕ್ಕಾಗಿ ಈಸ್ಟ್ ಇಂಡಿಯಾ ಕಂಪನಿಯ ಹೆಸರಿನಲ್ಲಿ ಭಾರತಕ್ಕೆ ಬಂದಿದ್ದ ಬ್ರಿಟೀಷರು 1857ರ ವೇಳೆಗೆ ಭಾರತವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದರು. 1857ರ ಮೊದಲ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹುತಾತ್ಮರಾಗಿ ಮಂಗಲ್ ಪಾಂಡೆಯ ಹೆಸರು ಭಾರತೀಯ ಇತಿಹಾಸದಲ್ಲಿ ಅಜರಾಮರವಾಗಿದೆ.
ಅವರು ಶಾಹೀದ್ ಮಂಗಲ್ ಪಾಂಡೆ ಎಂಬ ಹೆಸರಿನಿಂದ ಜನಮಾನಸದಲ್ಲಿ ನೆಲೆಸಿದ್ದಾರೆ.

ಮಂಗಲ್ ಪಾಂಡೆ ಜುಲೈ 19, 1827ರಂದು ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ನಾಗ್ವಾ ಗ್ರಾಮದಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು.
ಮಂಗಲ್ ಪಾಂಡೆ ತನ್ನ 22 ನೇ ವರ್ಷದಲ್ಲಿ ಬ್ರಿಟಿಷ್ ಮಿಲಿಟರಿ ಕಂಟೋನ್ಮೆಂಟ್‌ನಲ್ಲಿ 34 ನೇ ಬಂಗಾಳ ಸ್ಥಳೀಯ ಕಾಲಾಳುಪಡೆಯ 1446 ಕಾಲಾಳುಪಡೆ ಸೈನಿಕರಾಗಿ ಸೇರಿದರು. ಮಂಗಲ್ ಪಾಂಡೆ ಒಬ್ಬ ನಿಜವಾದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು ಮತ್ತು ಭಾರತೀಯ ಸ್ವಾತಂತ್ರ್ಯದ ಮೊದಲ ಹೋರಾಟಕ್ಕೆ ಕಿಡಿ ಹಚ್ಚಿದರು. ಬ್ರಿಟಿಷ್ ಸೈನ್ಯದಲ್ಲಿ
ಮೇ 10, 1857ರಂದು ಭಾರತೀಯ ಸೈನಿಕರು ಸಾಮೂಹಿಕ ದಂಗೆ ಏಳಲು ಮಂಗಲ್ ಪಾಂಡೆ ಕಾರಣಿಕರ್ತರಾದರು. ಇದನ್ನು ಬ್ರಿಟಿಷರು ಸಿಪಾಯಿ ದಂಗೆ -1857 ಎಂದು ಕರೆದರು.

1853 ಎನ್‌ಫೀಲ್ಡ್ ರೈಫಲ್ಡ್ ಮಸ್ಕೆಟ್ ಬಂದೂಕಿಗೆ ಹೊಸ ಗುಂಡನ್ನು ಲೋಡ್ ಮಾಡಲು ಸೈನಿಕರು ಕ್ಯಾಟ್ರಿಡ್ಜ್ ಅನ್ನು ಬಾಯಿಯಿಂದ ಕಚ್ಚಿ ತೆರೆದು ಗನ್‌ಪೌಡರ್ ಅನ್ನು ಸುರಿಯಬೇಕಾಗಿತ್ತು. ಇದು ಸಿಪಾಯಿ ದಂಗೆಗೆ ಮುಖ್ಯ ಕಾರಣವಾಗಿತ್ತು. ಬುಲೆಟ್ ಕಾರ್ಟ್ರಿಜ್ ಗೆ ಹಸು ಮತ್ತು ಹಂದಿಯ ಕೊಬ್ಬನ್ನು ಸವರಲಾಗಿದೆ ಎಂದು ವ್ಯಾಪಕ ವದಂತಿ ಹರಡಿ ಸೇನೆಯಲ್ಲಿದ್ದ ಹಿಂದು ಮತ್ತು ಮುಸ್ಲಿಂ ಸೈನಿಕರು ಉದ್ರಿಕ್ತರಾಗಿದ್ದರು. ಹಸು ಹಿಂದುಗಳಿಗೆ ಪೂಜನೀಯವಾಗಿದ್ದರೆ, ಹಂದಿ ಎಂದರೆ ಮುಸ್ಲಿಮರಿಗೆ ವರ್ಜ್ಯ.‌ ತಮ್ಮ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸಿಪಾಯಿಗಳು ಆ ಕೆಲಸವನ್ನು ನಿರಾಕರಿಸಿದರು. ಇದು ಭಾರತೀಯ ಸೈನಿಕರ ಸಾಮೂಹಿಕ ದಂಗೆಗೆ ಕಾರಣವಾಯಿತು.

ಸಾಮೂಹಿಕ ದಂಗೆ ಬ್ರಿಟಿಷ್ ಅಧಿಕಾರಿಗಳ ಮೇಲೆ ದಾಳಿ ಮಾಡಲು ಪಾಂಡೆಯನ್ನು ಪ್ರೇರೇಪಿಸಿತು. ಬ್ರಿಟಿಷ್ ಅಧಿಕಾರಿ ಮೇಜರ್ ಹ್ಯೂಸನ್ ಮತ್ತು ಲೆಫ್ಟಿನಂಟ್ ಭಾಘ್ ಮೇಲೆ ಮಂಗಲ್ ಪಾಂಡೆ, 1857, ಮಾರ್ಚ್ 29 ರಂದು ಗುಂಡಿನ ದಾಳಿ ನಡೆಸಿ ಅವರಿಬ್ಬರನ್ನೂ ನೆಲಕ್ಕುರುಳಿಸಿದ್ದರು. ಪರಿಣಾಮವಾಗಿ ಮಂಗಲ್ ಪಾಂಡೆಯವರನ್ನು ಬ್ರಿಟಿಷ್ ಸೇನೆ ಬಂಧಿಸಿತು. ಈ ಸಂದರ್ಭದಲ್ಲಿ ಲಕ್ಷಾಂತರ ಭಾರತೀಯರ ಹೃದಯದಲ್ಲಿ ರಾಷ್ಟ್ರೀಯತೆಯ ಜ್ವಾಲೆಯನ್ನು ಬೆಳಗಿಸಲು ಮಂಗಲ್ ಪಾಂಡೆ ಆತ್ಮಾರ್ಪಣೆ ಮಾಡಿಕೊಳ್ಳುವುದಕ್ಕೆ ನಡೆಸಿದ ಪ್ರಯತ್ನವೂ ವಿಫಲವಾಗಿತ್ತು. ಗಾಯಗೊಂಡಿದ್ದ ಮಂಗಲ್ ಪಾಂಡೆಯವರನ್ನು ಬ್ರಿಟೀಶ್ ಸರ್ಕಾರದ ಆದೇಶದ ಮೇರೆಗೆ ಏಪ್ರಿಲ್ 8 1857ರಂದು ಬ್ಯಾರಕ್ಪುರ(ಕೋಲ್ಕತ್ತ)ದಲ್ಲಿ ಗಲ್ಲಿಗೇರಿಸಲಾಯಿತು.

ಇಂದು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಕಾರಣದಿಂದಾಗಿ ನಮ್ಮ ದೇಶ ಸ್ವಾತಂತ್ರ್ಯವಾಗಿದೆ. ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮುಂದಿದೆ.‌ ನಾವು ಜವಾಬ್ದಾರಿಯುತ ಮತ್ತು ಸುಶಿಕ್ಷಿತ ನಾಗರಿಕರು ಎಂದು ಎನಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಂಗಲ ಪಾಂಡೆಯವರಂತ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ನಿಸ್ವಾರ್ಥ ಹೋರಾಟ ನಮ್ಮ ಪೀಳಿಗೆಯ ಮಕ್ಕಳಿಗೆ ಮಾದರಿಯಾಗಬೇಕು.

Tags: #74th Independence Daycelebrating the Independence of 74 yearsfreedomnewssacrificesShahid Mangal Pandeystruggles
ShareTweetSendShare
Join us on:

Related Posts

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

ದೆಹಲಿ ಹೈಕಮಾಂಡ್ ಮುಂದೆ ಮಂಡಿಯೂರಿ ಕುಳಿತ ರಾಜ್ಯ ಸರ್ಕಾರ: ಕರ್ನಾಟಕದ ಜನತೆ ಅನಾಥ ಎಂದ ಬಿಜೆಪಿ

by Shwetha
May 27, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೈಕಮಾಂಡ್ ಭೇಟಿ ಮತ್ತು ಕುರ್ಚಿ ಕಾಳಗದ ವಿಚಾರವೀಗ ಹದ್ದು ಮೀರಿದ ವಾಕ್ಸಮರಕ್ಕೆ ಕಾರಣವಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ದೆಹಲಿ ಹೈಕಮಾಂಡ್ ಮುಂದೆ...

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

ಕರ್ನಾಟಕ ರಾಜಕೀಯದಲ್ಲಿ ಹೈವೋಲ್ಟೇಜ್ ಡ್ರಾಮಾ ಸಿದ್ದರಾಮಯ್ಯಗೆ ಪ್ರಿಯಾಂಕಾ ಗಾಂಧಿ ಶಾಕ್ ಸಿಎಂ ಪಟ್ಟಕ್ಕೆ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ!

by Shwetha
May 27, 2026
0

ದೆಹಲಿಯ ಅಂಗಳದಲ್ಲಿ ಕರ್ನಾಟಕ ರಾಜಕೀಯದ ಭವಿಷ್ಯ ನಿರ್ಧಾರವಾಗುವ ಸಮಯ ಹತ್ತಿರ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವದ ಸಂಘರ್ಷ ಈಗ ಅಂತಿಮ...

ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್..! ದೆಹಲಿಯಲ್ಲಿ CM ಕುರ್ಚಿಗಾಗಿ ಫೈನಲ್ ಫೈಟ್

ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್..! ದೆಹಲಿಯಲ್ಲಿ CM ಕುರ್ಚಿಗಾಗಿ ಫೈನಲ್ ಫೈಟ್

by Shwetha
May 27, 2026
0

ಕರ್ನಾಟಕ ರಾಜಕೀಯದಲ್ಲಿ ಭಾರೀ ಕುತೂಹಲ ಸೃಷ್ಟಿಯಾಗಿದ್ದು, ರಾಜ್ಯದ ಅಧಿಕಾರ ರಾಜಕಾರಣಕ್ಕೆ ಇದೀಗ ದೆಹಲಿ ಕೇಂದ್ರಬಿಂದುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ‘ಫೈನಲ್ ಫೈಟ್’ ಆರಂಭವಾಗಿದ್ದು, ಇಡೀ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

by Shwetha
May 27, 2026
0

ನವದೆಹಲಿ : ಕರ್ನಾಟಕ ರಾಜಕಾರಣದ ದಿಕ್ಸೂಚಿ ಈಗ ದೆಹಲಿಯತ್ತ ತಿರುಗಿದೆ. ರಾಜ್ಯದ ಮುಖ್ಯಮಂತ್ರಿ ಗಾದಿಯ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ....

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 27, 2026
0

ದಿನ ಭವಿಷ್ಯ : 27-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಕ್ರಿಯಾಶೀಲವಾದ ದಿನವಾಗಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯ ಅಧಿಕಾರಿಗಳಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram