ಇಡೀ ಜಗತ್ತಿನ ಕಲ್ಯಾಣಕ್ಕಾಗಿ ಭಾರತ ಆತ್ಮನಿರ್ಭರ ಆಗಬೇಕಿದೆ. ಆತ್ಮನಿರ್ಭರ ಭಾರತ ಕೃಷಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಕೆಂಪುಕೋಟೆಯಲ್ಲಿ ಸತತ 7 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿ ದೇಶದ ಜನತೆಗೆ 74 ನೇ ಸ್ವಾತಂತ್ರ್ಯ ದಿನಾಚರಣೆ ಶುಭಕೋರಿ ಮಾತನಾಡಿದ ನಮೋ, ವೋಕಲ್ ಫಾರ್ ಲೋಕಲ್ ಮಂತ್ರ ಜಪಿಸಿದ್ದಾರೆ.
ಮೋದಿ ಬಾಷಣದಲ್ಲಿ ದೇಶದ ಹೊಟ್ಟೆಯನ್ನು ನಮ್ಮ ರೈತರು ತುಂಬಿಸುತ್ತಿದ್ದಾರೆ. ಜಗತ್ತಿಗೂ ನಮ್ಮ ರೈತರ ಕೊಡುಗೆ ಇದೆ. ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವಂತೆ ಕರೆ ನೀಡಿದರು. ಇನ್ನೂ ಸ್ಥಳೀಯ ವಸ್ತುಗಳನ್ನು ಖರೀದಿಸುವ ಮೂಲಕ ಸ್ಥಳೀಯರಿಗೆ ಬೆಂಬಲ ನೀಡಿ. ದೇಶದಲ್ಲಿ ಸಾಕಷ್ಟು ಬದಲಾವಣೆ ವೇಗವಾಗಿ ಜಾರಿಗೆ ಬರುತ್ತಿವೆ. ಬ್ಯಾಂಕ್ಗಳ ವಿಲೀನ, ಒನ್ ನೇಷನ್ ಒನ್ ರೇಷನ್ ಕಾರ್ಡ್ ಸೇರಿದಂತೆ ಅನೇಕ ಯೋಜನೆಗಳು ಜಾರಿಯಾಗುತ್ತಿವೆ. ರೈತರ ಎಪಿಎಂಸಿಯಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ನಿರೀಕ್ಷಿಸಿರಲಿಲ್ಲ. ಬಾಹ್ಯಾಕಾಶ ಕ್ಷೇತ್ರದಲ್ಲಿ ಯುವಕರಿಗೆ ಅವಕಾಶಗಳು ಸಿಗುವುದನ್ನು ನಾನು ನಿರೀಕ್ಷಿಸಿರಲಿಲ್ಲ. ದೇಶದ ಆರ್ಥಿಕತೆಯನ್ನು ಮೇಲೆ ತರುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನವೂ ನಡೆಯುತ್ತಿದೆ. ಹೆಚ್ಚು ವಿದೇಶಿ ಬಂಡವಾಳ ಹೂಡಿಕೆಯಲ್ಲೂ ಭಾರತ ಮುಂದಿದೆ. ಅನೇಕ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡಲು ಮುಂದಾಗಿವೆ ಎಂದು ತಿಳಿಸಿದ್ದಾರೆ.








