ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಕೇರಳ- ಸೆಪ್ಟೆಂಬರ್ ನಲ್ಲಿ ಕೋವಿಡ್ ಪ್ರಕರಣಗಳು ಘಾತೀಯವಾಗಿ ಹೆಚ್ಚಳ – ರಾಜ್ಯ ಸರ್ಕಾರ ಎಚ್ಚರಿಕೆ

admin by admin
August 15, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಕೇರಳ- ಸೆಪ್ಟೆಂಬರ್ ನಲ್ಲಿ ಕೋವಿಡ್ ಪ್ರಕರಣಗಳು ಘಾತೀಯವಾಗಿ ಹೆಚ್ಚಳ – ರಾಜ್ಯ ಸರ್ಕಾರ ಎಚ್ಚರಿಕೆ

ತಿರುವನಂತಪುರಂ, ಅಗಸ್ಟ್ 15: ಕೇರಳದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಕೋವಿಡ್ ಸಕಾರಾತ್ಮಕ ಪ್ರಕರಣಗಳು ಘಾತೀಯವಾಗಿ ಹೆಚ್ಚಾಗಬಹುದು ಎಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟವಾದ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ರಾಜ್ಯ ಸರ್ಕಾರವು ಲಭ್ಯವಿರುವ ಎಲ್ಲ ಸಂಪನ್ಮೂಲಗಳೊಂದಿಗೆ ಮಾನವಶಕ್ತಿ ಮತ್ತು ತಾಂತ್ರಿಕ ಪರಿಣತಿಯನ್ನು ಸಜ್ಜುಗೊಳಿಸುತ್ತಿದೆ.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಸೆಪ್ಟೆಂಬರ್‌ನಿಂದ ಪ್ರಕರಣಗಳು ಹೆಚ್ಚಾಗಲಿವೆ ಎಂಬ ತಜ್ಞರ ಅಭಿಪ್ರಾಯ ಸರ್ಕಾರಕ್ಕೆ ಬಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಹೇಳಿದ್ದಾರೆ. ರಾಜ್ಯವು ಪ್ರತಿದಿನ 10,000 ರಿಂದ 20,000 ಪ್ರಕರಣಗಳನ್ನು ನಿರೀಕ್ಷಿಸಬಹುದು ಮತ್ತು ಹೆಚ್ಚಿನ ಸಾವುನೋವುಗಳು ಸಂಭವಿಸಬಹುದು ಎಂದು ಸಚಿವರು ತಿಳಿಸಿದ್ದಾರೆ. ‌

ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಇಲಾಖೆಯು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಯ ಕಂಟ್ರಿ ಆಫೀಸ್ ಫಾರ್ ಇಂಡಿಯಾ (ಡಬ್ಲ್ಯುಸಿಒ) ಸೇರಿದಂತೆ ಏಜೆನ್ಸಿಗಳ ತಾಂತ್ರಿಕ ಸಲಹೆ ಮತ್ತು ಪರಿಣತಿಯನ್ನು ಕೋರಿದೆ. ಕೋವಿಡ್ ಬ್ರಿಗೇಡ್’ ಬ್ಯಾನರ್ ಅಡಿಯಲ್ಲಿ ಕೊರೋನಾ ತಡೆಗಟ್ಟುವ ಪ್ರಯತ್ನಗಳು ನಡೆಯುತ್ತಿವೆ.

ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳದೊಂದಿಗೆ ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತದೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ಆದ್ದರಿಂದ, ನಾವು ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಹಿಡಿತ ಸಾಧಿಸಬೇಕು. ಅದಕ್ಕಾಗಿ ನಮಗೆ ಸಾರ್ವಜನಿಕರ ಸಂಪೂರ್ಣ ಬೆಂಬಲ ಬೇಕಾಗುತ್ತದೆ. ಅವರು ಕಟ್ಟುನಿಟ್ಟಾಗಿ ಆರೋಗ್ಯ ಪ್ರೋಟೋಕಾಲ್ ಗಳನ್ನು ಅನುಸರಿಸಬೇಕು ಎಂದು ಆರೋಗ್ಯ ಸಚಿವ ಕೆ.ಕೆ.ಶೈಲಜಾ ಮನವಿ ಮಾಡಿದ್ದಾರೆ.

ಕೊರೋನಾ ವೈರಸ್ ಕೇಂದ್ರಬಿಂದುವಾಗಿರುವ ಚೀನಾದ ವುಹಾನ್‌ನಿಂದ ರಾಜ್ಯಕ್ಕೆ ಮರಳಿದ ನಂತರ ವೈದ್ಯಕೀಯ ವಿದ್ಯಾರ್ಥಿಯೊಬ್ಬನಿಗೆ ಜನವರಿ ತಿಂಗಳಲ್ಲಿ ಕೋವಿಡ್ -19 ಸೋಂಕು ದೃಢಪಡುವುದರ ಮೂಲಕ ರಾಜ್ಯದಲ್ಲಿ ಮೊದಲ ಪ್ರಕರಣ ವರದಿಯಾಯಿತು. ಮೇ 5 ರಂದು ರಾಜ್ಯದಲ್ಲಿ 500 ಪ್ರಕರಣಗಳು ವರದಿಯಾಗಿದ್ದವು. ಆದರೆ, ಇದು ಮೇ 27 ರ ವೇಳೆಗೆ 1000 ಕ್ಕೆ ದ್ವಿಗುಣಗೊಂಡಿತು. ಜುಲೈ 4 ರಂದು ಕೇರಳದಲ್ಲಿ 4000 ಪ್ರಕರಣಗಳು ವರದಿಯಾಗಿದ್ದರೆ, ಜುಲೈ 16 ರ ವೇಳೆಗೆ ರಾಜ್ಯವು 10,000 ದಾಟಿದೆ ಮತ್ತು ಜುಲೈ ಅಂತ್ಯದ ವೇಳೆಗೆ ರಾಜ್ಯದಲ್ಲಿ 20,000 ಕೋವಿಡ್-19 ಪ್ರಕರಣಗಳು ವರದಿಯಾಗಿವೆ.

ಆಗಸ್ಟ್ 14 ರಂದು ಕೇರಳದಲ್ಲಿ 1564 ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 39,708 ಮತ್ತು ಮಾರ್ಚ್‌ನಿಂದ ಸಾವಿನ ಸಂಖ್ಯೆ 129 ಎಂದು ವರದಿಯಾಗಿದೆ. ಈ ನಡುವೆ, ರಾಜ್ಯದ ಮೊದಲ ಕೋವಿಡ್ ಆಸ್ಪತ್ರೆ ಕಾಸರಗೋಡಿನಲ್ಲಿ ತೆರೆಯಲು ಸಜ್ಜಾಗಿದೆ. 5 ಎಕರೆ ಭೂಮಿಯಲ್ಲಿ 541 ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಯನ್ನು ಸ್ಥಾಪಿಸಲಾಗುತ್ತಿದೆ.

Tags: coronavirusCovid-19 positive casesissued a clear warningkeralaLatestnewsstate health departmentViralcoronavirus
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram