ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ ಪ್ರಧಾನಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದು, ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ ಹೈಕೋರ್ಟ್ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಬೇಕು. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ರಾಜಕೀಯ ನಾಯಕರು ಆರೋಪಗಳನ್ನು ಮಾಡುವುದನ್ನು ನಿಲ್ಲಿಸಬೇಕೆಂದು ಆಕ್ರೋಶ ಹೊರಹಾಕಿದ್ದು, ರಾಜ್ಯದಲ್ಲಿ ಎಸ್ ಡಿಪಿಐ ನಿಷೇಧಿಸಬೇಕೆಂದು ಒತ್ತಾಯಿಸಿದ್ದಾರೆ.
ಮಂಗಳವಾರ ರಾತ್ರಿ ನಡೆದಿದ್ದ ಗಲಭೆ ತೀವ್ರ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತ್ತು. ದುಷ್ಕರ್ಮಿಗಳು ಪೊಲೀಸರು ಸಾರ್ವಜನಿಕರು ಹಾಗೂ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದರು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲಿಸರು ಗೋಲೀಬಾರ್ ನಡೆಸುವ ಅನಿವಾರ್ಯ ಎದುರಾಗಿತ್ತು. ಘಟನೆ ವೇಳೆ ಪೊಲೀಸರ ಗುಂಡಿಗೆ ಮೂವರು ಬಲಿಯಾಗಿದ್ದರು.