ಗೋವಾದ ಮಾಜಿ ಸಿಎಂ ದಿ. ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಾಲ್ ಪರಿಕ್ಕರ್ ಗೆ ಕೊರೋನಾ ಸೋಂಕು
ಪಣಜಿ, ಅಗಸ್ಟ್ 16: ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರಿಕ್ಕರ್ ಅವರ ಪುತ್ರ ಬಿಜೆಪಿ ನಾಯಕ ಉತ್ಪಾಲ್ ಪರಿಕ್ಕರ್ ಅವರಿಗೆ ಕೊರೋನವೈರಸ್ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯ ಮೇರೆಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರೋನಾ ಸೋಂಕು ದೃಢಪಟ್ಟ ಪರೀಕ್ಷಾ ಫಲಿತಾಂಶಗಳು ಹೊರಬಂದ ನಂತರ, ಉತ್ಪಾಲ್ ಪರಿಕ್ಕರ್ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ತನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಲಘುವಾಗಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದರು.
ಭಾನುವಾರ ಅವರು”ವೈದ್ಯರ ಸಲಹೆಯ ಮೇರೆಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ಪಡೆಯಲು ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಎಲ್ಲರಿಗೂ ಧನ್ಯವಾದಗಳು” ಎಂದು ಟ್ವೀಟ್ ಮಾಡಿದ್ದಾರೆ.








