ಬೆಳಗಾವಿ : ಕುಂದಾನಗರಿ ಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಮಳೆಯ ಅರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇತ್ತ ಜಿಲ್ಲೆಯ ನದಿ ದಡದಲ್ಲಿರುವ ಬಹುತೇಕ ಸೇತುವೆಗಳು ಮುಳುಗಡೆ ಹಂತ ತಲುಪಿದ್ದು, ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹೆಚ್ಚಾದ ಪರಿಣಾಮ ನದಿ ಹಳ್ಳ ಕೊಳ್ಳಗಳು ಸಂಪೂರ್ಣ ಭರ್ತಿಯಾಗಿವೆ. ಮತ್ತೊಂದೆಡೆ ಬೈಲಹೊಂಗಲ ಮಾರ್ಗದ ಪಟ್ಟಿಹಾಳ ಕೆ.ಎಸ್. ಗ್ರಾಮದ ಸೇತುವೆ ಸಂಪೂರ್ಣ ಜಲಾವೃತವಾಗಿದ್ರೆ, ಇತ್ತ ಗ್ರಾಮದ ರಸ್ತೆಗಳು ಬಿರುಕುಬಿಟ್ಟಿದ್ದು, ಸಂಚರಿಸಲು ಜನರು ಭಯಪಡುವಂತಾಗಿದೆ. ಪಟ್ಟಿಹಾಳ ಕೆ.ಎಸ್ ಗ್ರಾಮದ ಹೊಲ ಗದ್ದೆ, ಸರಕಾರಿ ಶಾಲೆ, ದೇವಸ್ಥಾನಕ್ಕೂ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇಷ್ಟೇ ಅಲ್ಲ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಜಿಲ್ಲೆಯ ಪಟ್ಟಿಹಾಳ ಕೆ.ಎಸ್, ಸಂಪಗಾಂವ, ಪಾರೀಶ್ವಾಡ, ಗದ್ದಿ ಕರವಿನಕೊಪ್ಪ, ಎಂ.ಕೆ.ಹುಬ್ಬಳ್ಳಿ, ಹಿರೇ ಮುನ್ನವಳ್ಳಿ, ಸವದತ್ತಿಯ ವಿವಿಧೆಡೆ ಸೇತುವೆಗಳು ಜಲಾವೃತಗೊಂಡಿವೆ.
ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ
ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...








