ಯಾದಗಿರಿ : ಯಾದಗಿರಿ ಭಾರೀ ಮಳೆಯಿಂದಾಗಿ ಬಸವಸಾಗರ ಜಲಾಶಯ ಭರ್ತಿಯಾಗಿ ಡ್ಯಾಂನಿಂದ ಬರೊಬ್ಬರಿ 2.60 ಲಕ್ಷ ನೀರು ಬಿಡುಗಡೆ ಮಾಡಲಾಗಿದೆ. ಪರಿಣಾಮ ನದಿ ಪಾತ್ರದಲ್ಲಿ ಪ್ರವಾಹವಾಗಿದ್ದು, ಕೊಳ್ಳೂರು ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಯಾದಗಿರಿ ಮತ್ತು ರಾಯಚೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಸಂಚಾರ ಬಂದ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕೊಳ್ಳೂರು ಕ್ರಾಸ್ ಬಳಿಯೇ ಪೊಲೀಸರು ವಾಹನಗಳನ್ನು ತಡೆ ಹಿಡಿದು ವಾಪಸ್ ಕಳುಹಿಸುತ್ತಿದ್ದಾರೆ.
ಇತ್ತ ಪ್ರವಾಹದ ಮೊದಲ ಪರಿಣಾಮದಂತೆ ಸೇತುವೆ ಮುಳುಗಡೆಯಾಗಿದ್ದು, ನದಿ ಪಾತ್ರದ ಜನರು ಆತಂಕದಲ್ಲೇ ದಿನ ತೆಳ್ಳುವಂತಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ನದಿ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಲಿದೆ ಎನ್ನಲಾಗುತ್ತಿದೆ.









