ಶ್ರೀನಗರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಇಬ್ಬರು ಸಿಆರ್ ಪಿಎಫ್ ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ.
ಜಮ್ಮು ಕಾಶ್ಮಿರದ ಬರಾಮುಲ್ಲಾದಲ್ಲಿ ಸಿಆರ್ ಪಿಎಫ್ ಯೋಧರು ಹಾಗೂ ಪೊಲೀಸರು ಜಂಟಿಯಾಗಿ ಗಸ್ತು ತಿರುಗುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಕೀರಿ ಪ್ರದೇಶದಲ್ಲಿ ಯೋಧರು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಈ ಪ್ರದೇಶವನ್ನು ಯೋಧರು ಹಾಗೂ ಪೊಲೀಸರು ಸುತ್ತುವರಿದಿದ್ದು, ಭಯೋತ್ಮಾದಕರನ್ನು ಹಡೆಮುರಿ ಕಟ್ಟುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.








