ನವದೆಹಲಿ : NEET ಹಾಗೂ JEE ಮುಖ್ಯ ಪರೀಕ್ಷೆ ಮುಂದೂಡಿಕೆ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದೆ. ಈ ಸಂಬಂಧ NEET ಹಾಗೂ JEE ಪರೀಕ್ಷೆಗಳನ್ನು ಮುಂದೂಡಿಕೆ ಮಾಡುವಂತೆ ವಿವಿಧ ರಾಜ್ಯಗಳ ವಿದ್ಯಾರ್ಥಿಗಳಿಂದ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು.
ದೇಶಾದ್ಯಂತ ಕೊರೊನಾ ಹಾವಳಿಯಿದ್ದು, ಈ ಸಂದರ್ಭದಲ್ಲೂ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಹೀಗಾಗಿ ಪರೀಕ್ಷೆ ಮುಂದೂಡುವಂತೆ ಒಟ್ಟು 11 ವಿದ್ಯಾರ್ಥಿಗಳಿಂದ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತುಕೊಳ್ಳಲಿದೆ. ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ನಂತರ ಪರೀಕ್ಷೆ ಮುಂದೂಡಿಕೆ ಆಗಲಿದೆ ಇಲ್ಲವೇ ಎಂಬುದರ ಬಗ್ಗೆ ಗೊತ್ತಾಗಲಿದೆ.









