ಶಾಪಿಂಗ್ ಮಾಲ್ ವೊಂದರಲ್ಲಿ ಇರಿಸಿದ್ದ ಗಣಪತಿ ಮೂರ್ತಿಗಳನ್ನು ಬುರ್ಖಾಧಾರಿ ಮಹಿಳೆಯೊಬ್ಬರು ಒಡೆದು ಹಾಕುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸೀಮಾ ಎಂಬ ಟ್ವಿಟ್ಟರ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಹ್ರೇನ್‌ನ ಜುಫೈರ್ ಎಂಬಲ್ಲಿನ ಶಾಪಿಂಗ್ ಮಾಲ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ನಿರ್ದಿಷ್ಟ ಸಮುದಾಯವೊಂದರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಅಡಿಯಲ್ಲಿ ಪೊಲೀಸರು ಮಹಿಳೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಗಲ್ಫ್ ಡೈಲಿ ನ್ಯೂಸ್ ವರದಿ ಮಾಡಿದೆ.
https://twitter.com/i/status/1294920854329933826








