ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಅನಿತಾ ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೈತ್ರಿ ಸರ್ಕಾರದಲ್ಲಿ ಘೋಷಿಸಿದ ಸಾಲಮನ್ನಾ, ಬಡವರ ಬಂಧು ಯೋಜನೆಗಳ ಪ್ರಸ್ತಾಪ ಮಾಡದೇ ನನ್ನ ಪತಿ ಮೇಲೆ ದ್ವೇಷ ಸಾಧಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬಜೆಟ್ ನಲ್ಲಿ ನನಗೆ ಯಾವುದೇ ಒಳ್ಳೆಯ ಅಂಶ ಕಾಣಿಸಿಲ್ಲ ಎಂದ ಅನಿತಾ ಕುಮಾರಸ್ವಾಮಿ ಇದೊಂದು ನೀರಸ ಬಜೆಟ್ ಎಂದು ಟೀಕಿಸಿದರು.
ತನ್ನ ಪತಿ ಕುಮಾರಸ್ವಾಮಿಯವರು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ್ದ ರೈತರ ಸಾಲ ಮನ್ನಾ ಯೋಜನೆಯನ್ನು ಮುಂದುವರಿಸಿಕೊಂಡು ಹೋಗಬೇಕಿತ್ತು, ಬಡವರ ಬಂಧು ಯೋಜನೆಯನ್ನು ಕೈಬಿಡುವ ಮುನ್ಸೂಚನೆ ನೀಡಲಾಗಿದೆ. ಯಾವುದೇ ವರ್ಗಕ್ಕೂ ಆನುಕೂಲ ಆಗುವ ಲಕ್ಷಣಗಳು ಈ ಬಜೆಟ್ ನಲ್ಲಿ ಕಾಣುತ್ತಿಲ್ಲ ಎಂದು ಅನಿತಾ ಕುಮಾರಸ್ವಾಮಿ ಹೇಳಿದರು.
ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...








