ಶಬರಿಮಲೆ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯ ನಂತರವಷ್ಟೇ ಸಿಎಎ ಕುರಿತ ಅರ್ಜಿಗಳನ್ನು ವಿಚಾರಣೆಗೆ ತೆಗೆದು ಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಹಿರಿಯ ವಕೀಲ ಕಪಿಲ್ ಸಿಬಲ್ ಸಿಎಎ ಕುರಿತ ಅರ್ಜಿಗಳನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ಪೀಠಕ್ಕೆ ಮನವಿ ಮಾಡಿದ್ದರು. ಅಲ್ಲದೆ ಕೇಂದ್ರ ಸರ್ಕಾರ ಅರ್ಜಿಗಳಿಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆಯನ್ನು ಸಲ್ಲಿಸಿಲ್ಲ ಎಂದು ಅವರು ಹೇಳಿದರು.
ಇದಕ್ಕೆ ಉತ್ತರಿಸಿದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಕೇಂದ್ರ ಸರ್ಕಾರ ಕೆಲವೇ ದಿನಗಳಲ್ಲಿ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲಿದೆ ಎಂದರು. ಒಂಬತ್ತು ಸದಸ್ಯರ ನ್ಯಾಯಪೀಠ ಶಬರಿಮಲೆ ಸೇರಿದಂತೆ ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಮರುಪರಿಶೀಲನೆ ನಡೆಸುತ್ತಿದ್ದು, ಬಳಿಕವಷ್ಟೇ ಪೌರತ್ವ (ತಿದ್ದುಪಡಿ) ಕಾಯ್ದೆಗೆ (ಸಿಎಎ) ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








