ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ ಕೊರೊನಾ ಆರ್ಭಟ ಇಂದೂ ಕೂಡ ಮುಂದುವರೆದಿದೆ. ಇಂದು ಒಂದೇ ದಿನ 409 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಈವರೆಗೂ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 15 ಸಾವಿರದ ಗಡಿ ದಾಟಿದೆ. ಸೋಂಕಿತರ ಸಂಖ್ಯೆ ಬರೋಬ್ಬರಿ 15072ಕ್ಕೆ ಬಂದು ನಿಂತಿದೆ.
ಇನ್ನೂ ಮಹಾಮಾರಿಗೆ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಕಿಲ್ಲರ್ ಕೊರೊನಾಗೆ ಒಟ್ಟು ಬಲಿಯಾದವರ ಸಂಖ್ಯೆ 179ಕ್ಕೆ ಏರಿಕೆಯಾಗಿದೆ.
ಇತ್ತ ಗುಣಮುಖರ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, ಇಂದು ಒಂದೇ ದಿನ 500 ಮಂದಿ ಚೇತರಿಸಿಕೊಂಡಿದ್ದು, ಒಟ್ಟು 9452 ಜನರು ಗುಣಮುಖರಾದಂತಾಗಿದೆ. ಇನ್ನೂವರೆಗೂ ಜಿಲ್ಲೆಯಲ್ಲಿ 5431 ಸಕ್ರಿಯ ಪ್ರಕರಣಗಳಿವೆ.








