ತುಮಕೂರು : ಕಾರು ಮತ್ತು ಟವೇರಾ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ 13 ಮಂದಿ ಮೃತಪಟ್ಟಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ನಡೆದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಅಮೃತೂರು ಠಾಣಾ ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಬ್ಯಾಲದ ಕೆರೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿಗೆ ಬರುತ್ತಿದ್ದ ಟವೇರಾ ವಾಹನಕ್ಕೆ ಗುದ್ದಿದೆ. ಪರಿಣಾಮ ಟವೇರಾದಲ್ಲಿದ್ದ 9 ಹಾಗೂ ಕಾರಿನಲ್ಲಿದ್ದ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಟವೇರಾದಲ್ಲಿದ್ದ ಪ್ರಯಾಣಿಕರು ತಮಿಳುನಾಡಿನ ಹೊಸೂರಿನವರಾಗಿದ್ದು, ಧರ್ಮಸ್ಥಳ ಪ್ರವಾಸ ಮುಗಿಸಿ ಹೊಸೂರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.
ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!
ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...








