ಕಾಂಗ್ರೆಸ್ ಶಾಸಕ ಬಿ ಝಡ್ ಜಮೀರ್ ಅಹ್ಮದ್ ಖಾನ್ ಗೆ ಕೊರೋನಾ ಸೋಂಕು
ಬೆಂಗಳೂರು, ಅಗಸ್ಟ್18: ಕರ್ನಾಟಕದ ಕಾಂಗ್ರೆಸ್ ಶಾಸಕ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೋವಿಡ್-19 ಸೋಂಕು ದೃಢಪಟ್ಟಿದೆ ಮತ್ತು ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಕರ್ನಾಟಕದ ಕಾಂಗ್ರೆಸ್ ಶಾಸಕ ಬಿ ಝಡ್ ಜಮೀರ್ ಅಹ್ಮದ್ ಖಾನ್ ಮಂಗಳವಾರ ಹೇಳಿದ್ದಾರೆ.
ನಾನು ಸ್ವಲ್ಪ ಜ್ವರದಿಂದ ಬಳಲುತ್ತಿದ್ದೆ ಮತ್ತು ಇಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯು ನನಗೆ ಸೋಂಕು ತಗುಲಿರುವುದನ್ನು ದೃಢ ಪಡಿಸಿದೆ. ವೈದ್ಯರ ಸಲಹೆಯ ಮೇರೆಗೆ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಖಾನ್ ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ತನ್ನ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸುವಂತೆ ಅವರು ವಿನಂತಿಸಿದ್ದಾರೆ
ನಗರದ ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಾಜಿ ಸಚಿವರಾದ ಖಾನ್ ಅವರು ಕಳೆದ ವಾರ ಹಿಂಸಾಚಾರಕ್ಕೆ ಒಳಗಾದ ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿಯ ಪ್ರದೇಶಗಳಿಗೆ ಅನೇಕ ಬಾರಿ ಭೇಟಿ ನೀಡಿದ್ದರು.