ಮಂಡ್ಯ : ಜಲಾಯನ ಪ್ರದೇಶದಲ್ಲಿ ಭಾರಿ ವರ್ಷಧಾರೆ ಆದ ಪರಿಣಾಮ ಈಗಾಗಲೇ ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಕೆಲ ಭಾಗಗಳಲ್ಲಿ ಪ್ರವಾಹದ ಭೀತಿ ಕೂಡ ಶುರುವಾಗಿದ್ದು, ಇದರ ಮಧ್ಯೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಗೌರಿ ಹಬ್ಬದಂದು ಅಂದರೆ ಈ ತಿಂಗಳ 21ರಂದು ಕಾವೇರಿ ತಾಯಿಗೆ ಬಾಗಿನ ಅರ್ಪಿಸಲಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈಗಾಗಲೇ ಕಾವೇರಿ ತಾಯಿಗೆ ನಾಲ್ಕು ಬಾರಿ ಬಾಗಿನ ಅರ್ಪಿಸಿದ್ದಾರೆ. ಗೌರಿ ಹಬ್ಬದಂದು ಐದನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈ ಮೂಲಕ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಬಾರಿ ಬಾಗಿನ ಅರ್ಪಿಸಿದ ಕೀರ್ತಿಗೆ ಯಡಿಯೂರಪ್ಪ ಪಾತ್ರರಾಗಿದ್ದಾರೆ.
ವಿಶೇಷವೆಂದರೆ ಕಳೆದ ವರ್ಷ ಆಗಸ್ಟ್ 21ರಂದು ಕೆಆರ್‌ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಕೂಡ ಕೆಆರ್‌ಎಸ್ ಜಲಾಶಯ ಆಗಸ್ಟ್ ತಿಂಗಳಿನಲ್ಲಿ ಪುನಃ ಭರ್ತಿಯಾಗಿದ್ದು, ಮುಖ್ಯಮಂತ್ರಿಗಳು ಆಗಸ್ಟ್ 21 ರಂದು ಬಾಗಿನ ಅರ್ಪಿಸಲಿದ್ದಾರೆ.








