ಚಾಮರಾಜನಗರ: ಚಾಮರಾಜನಗರದಲ್ಲಿಂದು ಕರ್ನಾಟಕ ನಿಜಧ್ವನಿ ಸೇನಾ ಸಮಿತಿ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಅರೆ ಬೆತ್ತಲಾಗಿ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ.
ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ನಿಜಧ್ವನಿ ಸೇನಾ ಸಮಿತಿ ಅಧ್ಯಕ್ಷರಾದ ಸಿ.ಎನ್ ಗೋವಿಂದರಾಜು ಅವರು ವಹಿಸಿಕೊಂಡಿದ್ದರು. ಮೊದಲಿಗೆ ಶ್ರೀಚಾಮರಾಜೇಶ್ವರ ಉದ್ಯಾನವನದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಪ್ರಮುಖ ನಗರಗಳಲ್ಲಿ ಸಂಚರಿಸಿ ಪ್ರತಿಭಟಿಸಿದ್ರು. ಇದೇ ವೇಳೆ ಭೂ ಸುಧಾರೆಣೆ ಕಾಯ್ದೆಗೆ ತಿದ್ದುಪಡಿ ತರುವ ನೆಪದಲ್ಲಿ ರೈತರಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡಲು ಹೊರಟಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.








