ಬೆಂಗಳೂರು : ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೆ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಸ್ವಯಂ ಹೋಂ ಕ್ವಾರಂಟೈನ್ ಆಗಿದ್ದಾರೆ.
ಮೊನ್ನೆಯಷ್ಟೆ ಬಿ ವೈ ವಿಜಯೇಂದ್ರ ಅವರು ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿದ್ದರು. ನಿನ್ನೆ ಸಂಸದರಿಗೆ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೋಂ ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ಹಿರಿಯ ನಾಯಕರು, ಸಂಸತ್ ಸದಸ್ಯರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ರವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಅವರ ಸಂಪರ್ಕಕ್ಕೆ ಬಂದಿದ್ದರಿಂದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಗೃಹ ಕ್ವಾರಂಟೈನ್ ನಲ್ಲಿದ್ದೇನೆ. ಜೊತೆಗಿದ್ದವರು ಎಲ್ಲ ಮುಂಜಾಗ್ರತೆ ವಹಿಸಬೇಕು ಎಂದು ಈ ಮೂಲಕ ಕೋರುತ್ತೇನೆಎಂದು ಬರೆದುಕೊಂಡಿದ್ದಾರೆ.
ಹಿರಿಯ ನಾಯಕರು, ಸಂಸತ್ ಸದಸ್ಯರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ರವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ಅವರ ಸಂಪರ್ಕಕ್ಕೆ ಬಂದಿದ್ದರಿಂದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಗೃಹ ಕ್ವಾರಂಟೈನ್ ನಲ್ಲಿದ್ದೇನೆ.ಜೊತೆಗಿದ್ದವರು ಎಲ್ಲ ಮುಂಜಾಗ್ರತೆ ವಹಿಸಬೇಕು ಎಂದು ಈ ಮೂಲಕ ಕೋರುತ್ತೇನೆ.
— Vijayendra Yeddyurappa (@BYVijayendra) August 18, 2020