ಕೊಪ್ಪಳ : ಸಂಸದ ಕರಡಿ ಸಂಗಣ್ಣ ಅವರಿಗೆ ಹೆಮ್ಮಾರಿ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ಸದ್ಯ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ.
“ನನ್ನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡು ಬಂದ್ರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು”ಎಂದು ಕರಡಿ ಸಂಗಣ್ಣ ಟ್ವೀಟ್ ಮಾಡಿದ್ದಾರೆ.









