ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಸುಶಾಂತ್ ಸಿಂಗ್ ಅಭಿಮಾನಿಗಳು, ಕುಟುಂಬಸ್ಥರ ಇಷ್ಟು ದಿನಗಳ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಗಿದೆ.
ಇದೀಗ ಈ ವಿಚಾರವಾಗಿ ಬಾಲಿವುಡ್ ನ ಸ್ಟಾರ್ ನಟರಾದ ಅಕ್ಷಯ್ ಕುಮಾರ್ ಅವರು ಟ್ವೀಟ್ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸುಶಾಂತ್ ಸಾವಿನ ಬಳಿಕ ಇದೇ ಮೊದಲ ಬಾರಿಗೆ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ‘ಬಾಲಿವುಡ್ ಕಿಲಾಡಿ’ “ಸುಶಾಂತ್ ಸಿಂಗ್ ರಪೂತ್ ಸಾವಿನ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ ನೀಡಿದೆ. ಸತ್ಯ ಯಾವಾಗಲು ಜಯ ಸಾಧಿಸುತ್ತೆ ” ಎಂದಿದ್ದಾರೆ.









