ರಾಮನಗರ : ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿ ಸರ್ಕಾರವನ್ನು ಬೀಳಿಸಲು ಪ್ಲಾನ್ ರೂಪಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಬಾಂಬ್ ಸಿಡಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್ ಅವರು ಉದ್ಯಮಿ ಉದಯ್ ಗೌಡನನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಸರ್ಕಾರವನ್ನು ಬೀಳಿಸಲು ಬಿಗ್ ಪ್ಲ್ಯಾನ್ ನಡೆಸುತ್ತಿದ್ದಾರೆ. ಉದಯ್ ಗೌಡ ಇಸ್ಪೀಟ್ ದಂಧೆ ನಡೆಸುತ್ತಿದ್ದು, ನನ್ನ ಸರ್ಕಾರದಲ್ಲಿ ಕಡಿವಾಣ ಹಾಕಿದ್ದೆ. ಹೀಗಾಗಿ ಇವರೆಲ್ಲ ಸೇರಿ ಮೈತ್ರಿ ಸರ್ಕಾರ ಬೀಳಿಸಿದ್ದರು. ಇದೀಗ ಬಿಜೆಪಿ ಸರ್ಕಾರವನ್ನು ಬೀಳಿಸಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ
ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....








