ADVERTISEMENT
Sunday, November 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ವಿಚಾರ..!

saaksha tv by saaksha tv
March 6, 2020
in Newsbeat, Politics, Samagra karnataka
maheSh
Share on FacebookShare on TwitterShare on WhatsappShare on Telegram

ಬೆಂಗಳೂರು : ವಿಧಾನಸಭೆಯಲ್ಲಿಂದು ಅಸ್ಪೃಶ್ಯತೆ ವಿಚಾರ ಪ್ರತಿಧ್ವನಿಸಿ ಗಂಭೀರ ಚರ್ಚೆಗೆ ಎಡೆ ಮಾಡಿಕೊಟ್ಟಿತು. ಭಾರತದ ಸಂವಿಧಾನ ಕುರಿತ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಎನ್.ಮಹೇಶ್ ಅವರು, ಅಸ್ಪೃಶ್ಯತೆ ಆಚರಣೆ ಕಾನೂನು ಬಾಹಿರವಾಗಿದ್ದರೂ ಶೇ.70ರಷ್ಟು ಹಳ್ಳಿಗಳಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಜೀವಂತವಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವ ಪ್ರಮಾಣ ತೀರಾ ಕಡಿಮೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ಆಗ ಮಧ್ಯಪ್ರವೇಶಿಸಿದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ, ತಾವು ಶಾಲೆಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ತಮ್ಮ ಸ್ನೇಹಿತನ ಮನೆಯಲ್ಲಿ ಊಟ ಮಾಡಿದ ವಿಚಾರವನ್ನು ಪ್ರಸ್ತಾಪಿಸಿ, ಜಾತಿ ವ್ಯವಸ್ಥೆ ಜೀವಂತವಾಗಿರುವುದಕ್ಕೆ ನಾವೆಲ್ಲ ತಲೆ ತಗ್ಗಿಸಬೇಕು ಎಂದರು.

Related posts

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

November 29, 2026
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

November 29, 2026

ಈ ವೇಳೆ ಎದ್ದು ನಿಂತ ಕಾಂಗ್ರೆಸ್ ಶಾಸಕ ಡಾ.ರಂಗನಾಥ್, ತಾವು ವೈದ್ಯರಾಗಿದ್ದು, ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಜಾತಿ ನೋಡುವುದಿಲ್ಲ. ರಕ್ತ ಬಳಸುವಾಗ ಜಾತಿ ನೋಡುವುದಿಲ್ಲ. ಯುವ ಸಮುದಾಯದಲ್ಲಿ ಜಾತಿ ಧರ್ಮ ಯಾರೂ ಕೇಳುತ್ತಿಲ್ಲ. ನಮ್ಮಲ್ಲಿ ಬದಲಾವಣೆಯಾಗಬೇಕು, ದೌರ್ಜನ್ಯ ಪ್ರಕರಣಗಳ ಪರಿಶೀಲನೆಯೂ ಆಗಬೇಕು ಎಂದರು.

ಇದಕ್ಕೆ ಆಕ್ಷೇಪವೆಂಬಂತೆ ಮಾತನಾಡಿದ ಶಾಸಕ ಡಾ.ಅನ್ನದಾನಿ, ಮೆಡಿಕಲ್ ಕಾಲೇಜ್‍ ವೊಂದರಲ್ಲಿ ನನ್ನ ಮಗ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಜೊತೆಯಲ್ಲೇ ಕುಳಿತು ಕಾಫಿ ತಿಂಡಿ ತಿನ್ನುತ್ತಿದ್ದ ವಿದ್ಯಾರ್ಥಿನಿಯೊಬ್ಬರು ನನ್ನ ಮಗನ ಜಾತಿ ಕೇಳಿದ್ದಾರೆ. ಆತ ಯಾವುದೇ ಕೀಳರಿಮೆ ಇಲ್ಲದೆ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಹೇಳಿದ್ದಾನೆ. ಆದಾದ ಮೇಲೆ ನನ್ನ ಮಗನ ಜೊತೆ ಮಾತನಾಡುತ್ತಿದ್ದ ವಿದ್ಯಾರ್ಥಿನಿ ಎದುರಿಗೆ ಸಿಕ್ಕಿದರೂ ಮಾತನಾಡುತ್ತಿಲ್ಲವಂತೆ ಎಂದರು.

ಬಳಿಕ ಜೆಡಿಎಸ್ ಶಾಸಕ ಡಾ.ಶ್ರೀನಿವಾಸ್ ಮೂರ್ತಿ ಮಾತನಾಡಿ, 2008ರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಸೊಂಟ ಮುರಿದುಕೊಂಡಿದ್ದ ವ್ಯಕ್ತಿಗೆ ಹಣ ಖರ್ಚು ಮಾಡಿ ಚಿಕಿತ್ಸೆ ಮಾಡಿಸಿದ್ದೆ. ಆ ವ್ಯಕ್ತಿ ಮನೆಗೆ ಹೋದಾಗ ನಮ್ಮನ್ನು ಸ್ಪರ್ಶ ಸಮುದಾಯಕ್ಕೆ ಸೇರಿದವರಲ್ಲ. ಹಾಗಾಗಿ ಬೇರೆ ಅಭ್ಯರ್ಥಿಗೆ ಮತ ಹಾಕುವುದಾಗಿ ಹೇಳಿದರು ಎಂದು ತಾವು ಅನುಭವಿಸಿದ ನೋವಿನ ಕಥೆಯನ್ನು ಹೇಳಿಕೊಂಡರು. ಈ ವೇಳೆ ಮಾತನಾಡಿದ ಜಿ.ಟಿ.ದೇವೇಗೌಡ, ಸಾಕಷ್ಟು ಸುಧಾರಣೆಯಾಗಿದೆ. ಅಸ್ಪೃಶ್ಯತೆ ನಿವಾರಣೆಯಾಗಿದೆ. ಅಲ್ಲೊಂದು ಇಲ್ಲೊಂದು ಪ್ರಕರಣಗಳಿವೆ. ಅದನ್ನು ಸರಿಪಡಿಸಬೇಕಿದೆ. ಅಸ್ಪೃಶ್ಯತೆ ನಿವಾರಣೆಗೆ ಕಾನೂನಿದೆ ಎಂದರು.

ಆಗ ಮತ್ತೆ ಮಾತನಾಡಿದ ಎನ್. ಮಹೇಶ್ ಅವರು, ಸಮಾಜದಲ್ಲಿ ಬದಲಾವಣೆಯಾಗುತ್ತಿಲ್ಲ ಎಂದು ಹೇಳಿಲ್ಲ. ಆದರೆ ಕೆಲವೆಡೆ ಅಸ್ಪೃಶ್ಯತೆ ಇನ್ನು ಜೀವಂತವಾಗಿದೆ ಎಂಬುದನ್ನು ಗಮನಕ್ಕೆ ತಂದಿದ್ದೇನೆ ಎಂದರು.

Tags: G T DEVEGOUDAkarnatakaN MAHESH
ShareTweetSendShare
Join us on:

Related Posts

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

ಆಧಾರ್ ಕಾರ್ಡ್‌ನಲ್ಲಿ ಹೆಸರು ಅಪ್‌ಡೇಟ್ ಮಾಡಿಸಬೇಕೇ? ಇನ್ಮುಂದೆ ಈ ದಾಖಲೆಗಳು ಕಡ್ಡಾಯ: ಯುಐಡಿಎಐ ಹೊಸ ರೂಲ್ಸ್ ಜಾರಿ!

by Shwetha
November 29, 2026
0

ನವದೆಹಲಿ: ಮದುವೆಯಾದ ಬಳಿಕ ಸರ್‌ನೇಮ್ ಬದಲಾಯಿಸಿಕೊಳ್ಳಬೇಕೆ? ವಿಚ್ಛೇದನದ ನಂತರ ಹೆಸರನ್ನು ತಿದ್ದುಪಡಿ ಮಾಡಿಸಬೇಕೆ ಅಥವಾ ನಿಮ್ಮ ಆಧಾರ್ ಕಾರ್ಡ್‌ನಲ್ಲಿ ನಮೂದಾಗಿರುವ ಹೆಸರಿನ ದೋಷಗಳನ್ನು ಸರಿಪಡಿಸಿಕೊಳ್ಳಬೇಕೆ? ಹಾಗಿದ್ದರೆ ನೀವು...

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪಕ್ಷದಲ್ಲಿ ಮಹತ್ವದ ಹುದ್ದೆ ಫಿಕ್ಸ್? ಕುತೂಹಲ ಮೂಡಿಸಿದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ!

by Shwetha
November 29, 2026
0

ಬೆಳಗಾವಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಿಂದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ರಾಜಕೀಯ ಭವಿಷ್ಯದ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಪ್ರಸ್ತುತ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ...

ಪಡಿತರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಚಿಂತನೆ: ಉಚಿತ ಅಕ್ಕಿ ಬದಲು ಮೊಬೈಲ್‌ಗೆ ನೇರವಾಗಿ ಡಿಜಿಟಲ್ ಕರೆನ್ಸಿ ವರ್ಗಾವಣೆ?

ಪಡಿತರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಚಿಂತನೆ: ಉಚಿತ ಅಕ್ಕಿ ಬದಲು ಮೊಬೈಲ್‌ಗೆ ನೇರವಾಗಿ ಡಿಜಿಟಲ್ ಕರೆನ್ಸಿ ವರ್ಗಾವಣೆ?

by Shwetha
November 29, 2026
0

ನವದೆಹಲಿ: ದೇಶದ ಕೋಟ್ಯಂತರ ಪಡಿತರ ಚೀಟಿದಾರರಿಗೆ ನೇರವಾಗಿ ತಟ್ಟುವಂತಹ ಮಹತ್ವದ ಹಾಗೂ ಕ್ರಾಂತಿಕಾರಿ ಬದಲಾವಣೆಯೊಂದನ್ನು ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಪ್ರಸ್ತುತ ರಾಷ್ಟ್ರೀಯ ಆಹಾರ...

ನ್ಯಾಯಾಧೀಶರ ನೇಮಕಾತಿಯಲ್ಲಿ ಒಂದೇ ಸಮುದಾಯಕ್ಕೆ ಮಣೆ: ಎಸ್‌ಸಿ, ಎಸ್‌ಟಿ, ಒಬಿಸಿ ಕಡೆಗಣನೆ ವಿರುದ್ಧ ರಾಷ್ಟ್ರಪತಿಗೆ ಮಾಜಿ ಸಿಜೆಐ ಬಿ.ಆರ್. ಗವಾಯಿ ಪತ್ರ!

ನ್ಯಾಯಾಧೀಶರ ನೇಮಕಾತಿಯಲ್ಲಿ ಒಂದೇ ಸಮುದಾಯಕ್ಕೆ ಮಣೆ: ಎಸ್‌ಸಿ, ಎಸ್‌ಟಿ, ಒಬಿಸಿ ಕಡೆಗಣನೆ ವಿರುದ್ಧ ರಾಷ್ಟ್ರಪತಿಗೆ ಮಾಜಿ ಸಿಜೆಐ ಬಿ.ಆರ್. ಗವಾಯಿ ಪತ್ರ!

by Shwetha
November 29, 2026
0

ನವದೆಹಲಿ: ದೇಶದ ಉನ್ನತ ನ್ಯಾಯಾಂಗದ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಇತರೆ ಹಿಂದುಳಿದ ವರ್ಗಗಳು (ಒಬಿಸಿ), ಅಲ್ಪಸಂಖ್ಯಾತರು ಹಾಗೂ ಮಹಿಳೆಯರ...

ಮೈಂಡ್ ಇಟ್, ಹೊಸ ವರ್ಷಕ್ಕೆ ನಿನಗೊಂದು ಉಡುಗೊರೆ ಕೊಟ್ಟೇ ಕೊಡುವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು!

ಮೈಂಡ್ ಇಟ್, ಹೊಸ ವರ್ಷಕ್ಕೆ ನಿನಗೊಂದು ಉಡುಗೊರೆ ಕೊಟ್ಟೇ ಕೊಡುವೆ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು!

by Shwetha
November 29, 2026
0

ಚಿಕ್ಕಬಳ್ಳಾಪುರ: ತಮ್ಮ ವಿಶಿಷ್ಟ ವಾಗ್ದಾಳಿ ಹಾಗೂ ರಾಜಕೀಯ ಟೀಕೆಗಳ ಮೂಲಕ ಆಗಾಗ್ಗೆ ಸುದ್ದಿಯಲ್ಲಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು, ಮಾಜಿ ಸಂಸದ ಪ್ರತಾಪ್ ಸಿಂಹ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram