ಬೆಂಗಳೂರು : ಅರಸು ಅವರಿಗೆ ಅಗೌರವ ತೋರಿದ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಎರಡು ವರ್ಷಗಳಿಂದ ಪ್ರತಿಷ್ಠಿತ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ? ಎಂದು ಪ್ರಶ್ನಿಸಿದ್ದಾರೆ.
ಡಿ.ದೇವರಾಜ ಅರಸು ಅವರ ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ, ಉಳುವವನೆ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ, ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.









