ರಾಮನಗರ: ‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸುವ ಛಲವಿದೆ. ಸಾಯುವವರೆಗೂ ನಾನು ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ‘ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವಂತೆ ನಾನು ಮೈತ್ರಿ ಸರ್ಕಾರ ರಚನೆ ವೇಳೆ ಹೇಳಿದ್ದೆ. ಆದರೆ, ಕೇಂದ್ರದ ಕಾಂಗ್ರೆಸ್ ನಾಯಕರು ಖರ್ಗೆ ಸಿಎಂ ಆಗಲು ಒಪ್ಪಲಿಲ್ಲ’. ಕೇಂದ್ರದ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ನಾವು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ರಾಜಕೀಯ ಏಳುಬೀಳುಗಳ ಮಧ್ಯೆ ಮೈತ್ರಿ ಸರ್ಕಾರ ಬಿದ್ದು ಹೋಯಿತು’ ಎಂದು ಹೇಳಿದರು.
10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ – ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್
ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...








