ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಹಿನ್ನೆಲೆ ಬಳ್ಳಾರಿಯ ವಡ್ಡರಹಳ್ಳಿ ನಿವಾಸಿ ನಬಿ ರಸೂಲ್ ಅವರ ಮನೆಗೆ ಇಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಅಲ್ಲದೆ ನಬಿ ಅವರನ್ನು ಮನೆಯಿಂದ ಹೊರಗೆ ಕರೆಸಿ ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಿ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿಸಿದ್ದಾರೆ.
ಬಳಿಕ ಮಾತನಾಡಿದ ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಅನೂಪ್ ಕುಮಾರ್, ‘ನಬಿ ಅವರು ಮೋದಿ ಅವರ ಛಾಯಾಚಿತ್ರಗಳನ್ನು ಎಡಿಟ್ ಮಾಡಿ, ಅವರನ್ನು ಅಪಮಾನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ವಿಷಯ ತಿಳಿದು ಅವರ ಮನೆಗೆ ಹೋಗಿ ಅಲ್ಲಿ ಪ್ರತಿಭಟನೆ ನಡೆಸಲಾಗಿದೆ. ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷಮೆ ಕೇಳಿಸಲಾಗಿದೆ. ಇಂತಹ ಘಟನೆಗಳು ಪುನರಾವರ್ತನೆ ಆಗಬಾರದು ಎಂದು ಎಚ್ಚರಿಕೆ ಕೊಡಲಾಗಿದೆ’ ಎಂದರು.
ಕಾರ್ಮಿಕರ ಬವಣೆ ಆಲಿಸಿದ CM ಡಿಕೆ ಶಿವಕುಮಾರ್ ಶೈಲಿಗೆ ಹೈಕೋರ್ಟ್ ಫಿದಾ: ಡಿಕೆಶಿ ಎಪಿಎಂಸಿ ಭೇಟಿ ಗಿಮಿಕ್ ಅಲ್ಲ ಇದು ಗ್ರೇಟ್ ಜಾಬ್
ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ನೀಡಿದ ಅನಿರೀಕ್ಷಿತ ಭೇಟಿ ಮತ್ತು ಅಲ್ಲಿನ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಈಗ...








