ಬೆಂಗಳೂರು : ಕೊರೊನಾ ಆತಂಕದ ಮಧ್ಯೆ ನಾಡಿನ ಎಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಣೇಶ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವಿನಾಯಕ ಚತುರ್ಥಿ ಹಬ್ಬದ ಹಾರ್ದಿಕ ಶುಭಾಶಯಗಳು. ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ, ಅಡಚಣೆಗಳನ್ನು ಗಣಪತಿಯೂ ದೂರ ಮಾಡಲಿ ಹಾಗೂ ರಾಜ್ಯದ ಜನತೆಗೆ ವಿನಾಯಕ ಸನ್ಮಂಗಳವನ್ನುಂಟು ಮಾಡಲಿ. ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಪಾಲಿಸೋಣ ಎಂದು ಬರೆದುಕೊಂಡಿದ್ದಾರೆ.









