ಬೆಂಗಳೂರು : ನಿನ್ನೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಇಂದು ಪಕ್ಷದ ಕಚೇರಿಯಲ್ಲಿ ಬ್ಯಾಕ್ ಟು ಬ್ಯಾಕ್ ಸಭೆಗಳನ್ನು ನಡೆಸುತ್ತಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಂತೋಷ್ ಅವರು, ರಾಜ್ಯ ಬಿಜೆಪಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿಗಳು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರುಗಳ ಜೊತೆ ಇಡೀ ದಿನ ಸಭೆ ನಡೆಸುತ್ತಿದ್ದಾರೆ.
ಸಭೆಯಲ್ಲಿ ಪಕ್ಷ ಸಂಘಟನೆ, ಬಿಬಿಎಂಪಿ ಚುನಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ವಿಶೇಷವೆಂದರೇ ಸಂತೋಷ್ ಅವರು ಎಲ್ಲರನ್ನೂ ಪ್ರತ್ಯೇಕ ಪ್ರತ್ಯೇಕವಾಗಿ ಕರೆಸಿ ಸಮಾಲೋಚನೆ ನಡೆಸುತ್ತಿದ್ದಾರೆ. ಈ ಮೂಲಕ ಸಿಎಂ ಬದಲಾವಣೆ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.









