ಬಿಹಾರದಲ್ಲಿ ವಿಧಾನಸಭಾ ಚುನಾವಣಾ ಚಟುವಟಿಕೆಗಳು ರಂಗೇರಿದ್ದು, ಮುಂಬರುವ ಬಿಹಾರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಮುಖ್ಯಮಂತ್ರಿ ನಿತೀಶ್‍ಕುಮಾರ್ ನಾಯಕತ್ವದಲ್ಲೇ ಮೈತ್ರಿಕೂಟ ಎದುರಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದ್ದಾರೆ. ವಿಡಿಯೋ ಕಾನರೆನ್ಸ್ ಮೂಲಕ ಬಿಜೆಪಿಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ನಡ್ಡಾ ಅವರು, ಬಿಜೆಪಿ, ಜೆಡಿಯು ಮತ್ತು ಎಲ್‍ಜೆಪಿ ಮೈತ್ರಿಕೂಟ ಒಂದಾಗಿ ಚುನಾವಣೆಯನ್ನು ಎದುರಿಸಲಿದ್ದು, ಪುನಃ ಅಕಾರಕ್ಕೆ ಬರಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿಹಾರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮಾತನಾಡಿದ ನಡ್ಡಾ ಅವರು ಮಕಾನ ಕೈಗಾರಿಕೆ, ಮಧುಬನಿ ಚಿತ್ರಕಲೆ, ಬಾಗಲಪುರ್ ರೇಷ್ಮೆ ಕೈಗಾರಿಕೆ ಸೇರಿದಂತೆ ಹಲವು ರೀತಿಯ ಯೋಜನೆಗಳನ್ನು ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಕೋವಿಡ್ 19 ಸಂದರ್ಭದಲ್ಲಿ ಮುಖ್ಯಮಂತ್ರಿ ನಿತೀಶ್‍ಕುಮಾರ್ ಅತ್ಯುತ್ತಮವಾದ ಕೆಲಸ ಮಾಡಿದ್ದಾರೆ ಎಂದ ನಡ್ಡಾ ಅವರು ಬಿಹಾರದಲ್ಲಿ ಇಂದು ಶೇ.73.48ರಷ್ಟು ಕೊರೊನಾ ಸೋಂಕಿತ ರೋಗಿಗಳು ಗುಣಮುಖರಾಗಿದ್ದಾರೆ. ಇದಕ್ಕಾಗಿ ನಾನು ಸರ್ಕಾರವನ್ನು ವಿಶೇಷವಾಗಿ ಅಭಿನಂದಿಸುತ್ತೇನೆ ಎಂದು ಮೆಚ್ಚುಗೆ ಶ್ಲಾಘಿಸಿದರು.








