ಚೆನ್ನೈ : ಡಿಎಂಕೆ ಹಿರಿಯ ನಾಯಕ ಕೆ. ಅನ್ಬಳಗನ್ (97) ಅನಾರೋಗ್ಯದಿಂದಾಗಿ ಇಂದು ಮುಂಜಾನೆ ವಿಧಿವಶರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಡಿಎಂಕೆ ಪಕ್ಷದ ಅತ್ಯಂತ ಹಿರಿಯ ಮುಖಂಡರಾಗಿದ್ದ ಅವರು ಮಾಜಿ ಮುಖ್ಯಮಂತ್ರಿ ಡಾ.ಎಂ.ಕರುಣಾನಿಧಿ ಅವರಿಗೆ ಆಪ್ತ ಮಿತ್ರರಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಫೆ. 24ರಂದು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನಪ್ರಿಯ ಧುರೀಣರಾಗಿದ್ದ ಅವರು 9 ಬಾರಿ ಶಾಸಕರಾಗಿದ್ದರು. 43 ವರ್ಷಗಳ ಕಾಲ ಅನ್ಬಳಗನ್ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅನಾರೋಗ್ಯ ಕಾರಣದಿಂದ ಅವರು ಕೆಲದಿನಗಳಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದರು.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...








