ನವದೆಹಲಿ : ಎಐಸಿಸಿ ಅಧ್ಯಕ್ಷರ ಆಯ್ಕೆ ವಿವಾರವಾಗಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪತ್ರ ಬಂಡಾಯದ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 23 ಪ್ರಮುಖರ ನಾಯಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸದಂತೆ ಸಭೆಯಲ್ಲಿ ಭಾರಿ ಆಕ್ರೋಶ ಹೊರಹಾಕಿದ್ದಾರೆ.
ಕೋವಿಡ್ 19, ಮಧ್ಯಪ್ರದೇಶ, ರಾಜಸ್ಥಾನ ಬಿಕ್ಕಟ್ಟಿನ ಸಮಯದಲ್ಲಿ ಹಿರಿಯ ನಾಯಕರಾದವರು ಈ ರೀತಿ ಪತ್ರ ಬರೆಯುವುದು ಸರಿಯಲ್ಲ, ಪತ್ರ ಬರೆಯಲು ಇದು ಸೂಕ್ತ ಸಮಯವೂ ಅಲ್ಲ ಎಂದು ರಾಹುಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಸೋನಿಯಗಾಂಧಿ ಗೆ ಆರೋಗ್ಯ ಸಮಸ್ಯೆ ಇದೆ. ಅವರು ಆಸ್ಪತ್ರೆ ದಾಖಲಾದ ವೇಳೆ ಪತ್ರ ಬರೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ರಾಹುಲ್ ಗಾಂದಿ, ಅಸಮಾಧಾನ ಭಿನ್ನಾಭಿಪ್ರಾಯಗಳಿದ್ದರೇ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಬೇಕಿತ್ತು.. ಅದು ಬಿಟ್ಟು ಈ ರೀತಿ ಬಹಿರಂಗವಾಗಿ ಪತ್ರ ಬರೆಯುವುದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.
23 ಪ್ರಮುಖ ನಾಯಕರು ಕಾಂಗ್ರೆಸ್ಸಿಗೆ ಪೂರ್ಣಾವಧಿ ನಾಯಕತ್ವ ಬೇಕು. ಅಧ್ಯಕ್ಷರಾದವರು ಸಕ್ರೀಯವಾಗಿ ಕೆಲಸ ಮಾಡಬೇಕು. ಸಾಮೂಹಿಕ ನಾಯಕತ್ವದೊಂದಿಗೆ ಕೆಲಸ ಮಾಡಬೇಕು. ಪಕ್ಷದ ಒಳಗಡೆ ಚುನಾವಣೆ ನಡೆಸಬೇಕು ಇತ್ಯಾದಿ ವಿಚಾರಗಳನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದರು.








