ನವದೆಹಲಿ : ದೇಶದಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. ದಿನದಿಂದ ದಿನಕ್ಕೆ ಭಾರತದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಕೂಡ ಕೊರೊನಾ ಸ್ಪೋಟವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ ಒಟ್ಟು 61,408 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. 
ಇನ್ನು ಒಂದೇ ದಿನ ದೇಶದಲ್ಲಿ 836 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 3,106,348 ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 57,542 ಕ್ಕೆ ತಲುಪಿದೆ . ಇನ್ನೂ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 57,468 ಜನ ಮಹಾಮಾರಿಯಿಂದ ಚೇತರಿಸಿಕೊಂಡಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಒಟ್ಟು ಸಂಖ್ಯೆ 31,06,349 ಕ್ಕೆ ಬಂದು ನಿಂತಿದೆ.








