ಚಿಕ್ಕಮಗಳೂರು : ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ವಿರುದ್ಧ ಕಿಡಿಕಾರಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗೂಂಡಾ ಮನಸ್ಥಿತಿಯಿಂದ ಹೊರಬರಬೇಕು ಎಂದು ಸಿ.ಟಿ ರವಿ ಆಕ್ರೋಶ ಹೊರ ಹಾಕಿದ್ದಾರೆ.
ಜಿಲ್ಲೆಯ ಜಿಲ್ಲೆ ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಹೊರಬಂದಿಲ್ಲ. ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಮ್ಮ ಸರ್ಕಾರದಲ್ಲಿ ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ ಎಂದ ಸಿ.ಟಿ ರವಿ, ಡಿಕೆಶಿವಕುಮಾರ್ ಗೂಂಡಾ ಮನಸ್ಥಿತಿಯಿಂದ ಹೊರಬರಬೇಕು. ಇಲ್ಲದಿದ್ದರೆ ನಿಮಗೂ, ಪಕ್ಷಕ್ಕೂ ಕೆಟ್ಟ ಹೆಸರು ಎಂದು ಕುಟುಕಿದ್ದಾರೆ.









