ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಹಾಮಾರಿ ಕೊರೊನಾ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇಂದು ಒಟ್ಟು 123 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3063ಕ್ಕೆ ಏರಿಕೆಯಾಗಿದೆ. ಇಂದು 105 ಮಂದಿ ಕೊರೊನಾ ವೈರಸ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಇಂದು ಮೂವರು ಸಾವನ್ನಪ್ಪಿದ್ದು, ಈ ಮೂಲಕ 59 ಜನ ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇನ್ನು 1061 ಸಕ್ರಿಯ ಪ್ರಕರಣಗಳಿದೆ.
ಸೋಂಕಿತರ ಪೈಕಿ ಚಿಕ್ಕಮಗಳೂರು 34, ತರೀಕೆರೆ 25, ಕಡೂರು 46, ಕೊಪ್ಪ 3, ಅಜ್ಜಂಪುರ 8, ಮೂಡಿಗೆರೆಯಲ್ಲಿ 7 ಪ್ರಕರಣಗಳು ಪತ್ತೆಯಾಗಿದೆ. ಇನ್ನೂ ದಿನೇ ಕೊರೊನಾ ಅಬ್ಬರ ಹೆಚ್ಚುತ್ತಲೇ ಇರುವುದು ಜನರನ್ನು ಆತಂಕ್ಕೀಡುಮಾಡಿದೆ.








