ಬೆಂಗಳೂರು : ರ‍್ಯಾಪರ್ ಚಂದನ್ ಶೆಟ್ಟಿಯ ‘ಕೋಲು ಮಂಡೆ ಜಂಗಮ ದೇವರು’ ರ‍್ಯಾಪ್ ಸಾಂಗ್ ಈಗ ವಿವಾದಕ್ಕೆ ಕಾರಣವಾಗಿದೆ. ತಮ್ಮ ವಿರುದ್ಧ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಕೇಳಿ ಬರುತ್ತಿದ್ದಂತೆಯೇ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನೋ ಕಾರಣಕ್ಕೆ ರ‍್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
‘ಕೋಲು ಮಂಡೆ’ ಸಾಂಗ್ ನಲ್ಲಿ ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.








