ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಸದ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಡಿ.ಕೆ.ಶಿವಕುಮಾರ್ ಕಳೆದ ನಾಲ್ಕು ದಿನಗಳಿಂದ ಬೆನ್ನು ನೋವು, ಜ್ವರದಿಂದ ಬಳಲುತ್ತಿದ್ದರು. ಹಿನ್ನೆಲೆ ಅವರು 2 ದಿನದ ಹಿಂದೆ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಇದೀಗ ಅವರ ವರದಿ ಕೋವಿಡ್ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.