ಚೆನ್ನೈ: ಕಾಲಿವುಡ್ ನ ಹಿರಿಯ ನಟ ಸೂರ್ಯಕಾಂತ್ ಅವರ ಪುತ್ರ ವಿಜಯ್ ಹರೀಶ್ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅವರನ್ನು ತಿರುವೊಟ್ಟಿಯೂರ್ ಮಹಿಳಾ ಪೊಲೀಸರು ಬಂಧಿಸಿದ್ದಾರೆ.
ವಿಜಯ್ ಹರೀಶ್ ಅತ್ಯಾಚಾರದ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡುವುದಾಗಿ ಯುವತಿಗೆ ಬೆದರಿಕೆ ಹಾಕಿದ ಆರೋಪವೂ ಇದೆ. ಆರೋಪಿ ಹರೀಶ್ ಚೆನ್ನೈ ಮೂಲದ 20 ವರ್ಷದ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಚೆನ್ನೈನ ವಿರುಗಂಬಕ್ಕಂನಲ್ಲಿರುವ ಅಪಾರ್ಟ್ ಮೆಂಟ್‌ನಲ್ಲಿ ಇದ್ದಾಗ ಇಬ್ಬರಿಗೂ ಪರಿಚಯವಾಗಿದ್ದು, ಜನವರಿಯಲ್ಲಿ ವಿಜಯ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹರೀಶ್ ನನಗೆ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಆದರೆ ಅದರಲ್ಲಿ ನನಗೆ ತಿಳಿಯದಂತೆ ಮತ್ತು ಬರುವ ಔಷಧಿಯನ್ನು ಮಿಕ್ಸ್ ಮಾಡಿದ್ದನು. ಅದನ್ನು ಕುಡಿದ ನಂತರ ನನಗೆ ಪ್ರಜ್ಞೆ ತಪ್ಪಿದೆ. ಬಳಿಕ ವಿಜಯ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ಹೇಳಿದ್ದಾರೆ.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








