ವಿಜಯಪುರ: ಕೊರೊನಾ ಕಿಟ್ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಕೊರೊನಾ ಉಪಕರಣಗಳ ಖರೀದಿಯಲ್ಲಿ ಒಂದು ಪೈಸೆಯೂ ಅಕ್ರಮವಾಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಪ್ರತಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದರು.
ಮಾಸ್ಕ್, ಸ್ಯಾನಿಟೈಸರ್ ಹಾಗೂ ವೆಂಟಿಲೇಟರ್‌ಗಳ ಖರೀದಿಯ ಎಲ್ಲಾ ಆರೋಪಗಳ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ನೀಡಲು ನಾನು ಸಿದ್ದನಿದ್ದೇನೆ. ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಹೀಗಿರುವಾಗ ಕೊರೊನಾ ಕಿಟ್ ಖರೀದಿಯ ಪ್ರತಿಯೊಂದು ಲೆಕ್ಕವನ್ನು ಸದನದಲ್ಲಿ ನೀಡುತ್ತೇನೆ ಎಂದರು.
ಆಲಮಟ್ಟಿ ಜಲಾಶಯದ ಎತ್ತರವನ್ನು 519 ಅಡಿಗಳಿಂದ 524 ಅಡಿಗೆ ಎತ್ತರಿಸಲು ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಪ್ರಯತ್ನ ನಡೆಸಲಿದೆ. ಇದರಿಂದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಸಂಗ್ರಹ ಸಾಮರ್ಥ್ಯವನ್ನು 130 ಟಿಎಂಸಿಗೆ ಹೆಚ್ಚಿಸಬಹುದಾಗಿದೆ. ಈ ಸಂಬAಧ ಅಗತ್ಯವಿರುವ ಅನುದಾನವನ್ನು ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದರು.
ಕೊರೊನಾದಿಂದ ರಾಜ್ಯದ ಖಜಾನೆ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲು ಸಾಲ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಹೇಳಿದ್ದಾರೆ.
ಮುಂದಿನ ಜಿಎಸ್‌ಟಿ ಸಭೆಯಲ್ಲಿ ರಾಜ್ಯದ ಪಾಲಿನ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತೆ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಚಿವ ಪ್ರಹ್ಲಾದ್ ಜೋಶಿ ಚರ್ಚಿಸಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವರ ನೀಡಿದರು.
ಕ್ರಿಕೆಟ್ ದಿಗ್ಗಜ ಯುವಿ ಗೆ ಭಜ್ಜಿಯಿಂದ ವಿಶೇಷ ಜನ್ಮದಿನದ ಶುಭಾಶಯ!
ಭಾರತದ ಕ್ರಿಕೆಟ್ ದಿಗ್ಗಜ ಯುವರಾಜ್ ಸಿಂಗ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು, ಕ್ರಿಕೆಟ್ ಲೋಕದ ಗಣ್ಯರು, ಮತ್ತು ಸಹ ಆಟಗಾರರು ಶುಭಾಶಯ ಕೋರುತ್ತಿದ್ದಾರೆ. ಈ ಸಂದರ್ಭದಲ್ಲಿ, ಅವರ ಸ್ನೇಹಿತ...