ಗದಗ : ದಿನೇ ದಿನೇ ಕೊರೊನಾ ತನ್ನ ಕಬಂದ ಬಾಹುವನ್ನ ಹೆಚ್ಚಿಸಿಕೊಳ್ಳುತ್ತಲೇ ಇದೆ. ದಿನೇ ದಿನೇ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಲೇ ಇರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಇಂದು ಗದಗದನಲ್ಲಿ ಕೊರೊನಾ ಸ್ಪೋಟವಾಗಿದ್ದು, ಒಂದೇ ದಿನ ಮತ್ತೆ 175 ಜನರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೊಂಕು ಪೀಡಿತರ ಸ0ಖ್ಯೆ 4392 ಕ್ಕೆ ಏರಿಕೆ ಯಾಗಿದೆ. 223 ಜನರ ವರದಿ ಬರಬೇಕಿದೆ.ಇಲ್ಲಿಯವರೆಗೆ ಕೋವಿಡ್‍ನಿಂದ 67 ಜನರು ಮೃತಪಟ್ಟಿದ್ದಾರೆ. 3122 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈಗಲೂ ಒಟ್ಟು 1203 ಸಕ್ರಿಯ ಕೇಸ್ ಗಳಿವೆ.
ಮೈಸೂರು: ಇತ್ತ ಸಾಂಸ್ಕøತಿಕ ನಗರಿ ಮೈಸೂರಿನಲ್ಲೂ ಕೊರೊನಾ ಆರ್ಭಟ ಜೋರಾಗಿಯೇ ಇದೆ. ಒಂದೇ ದಿನ ಬರೋಬ್ಬರಿ 1331 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 13939 ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ಇಂದು 16 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 361 ಕ್ಕೆ ಏರಿಕೆಯಾಗಿದೆ.
ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಮಣಿದ ಸರ್ಕಾರ : ಸಮಿತಿ ರಚನೆಗೆ ಒಪ್ಪಿಗೆ – ಆರ್. ಆಶೋಕ್
ವಕ್ಫ್ ಮಂಡಳಿ ಹಿಂದೂಗಳು ಮತ್ತು ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದೇನೆ. ಈ ಹೋರಾಟದಲ್ಲಿ ಬಿಜೆಪಿಗೆ ತಕ್ಕ ಮಟ್ಟಿನ ಜಯ ದೊರಕಿದೆ....