ಕೊರೊನಾ ಹಾವಳಿ ನಡುವೆಯೂ ನೀಟ್ ಮತ್ತು ಜೆಇಇ ಮುಖ್ಯ ಪ್ರವೇಶ ಪರೀಕ್ಷೆಗಳನ್ನುನಡೆಸಲು ಈಗಾಗಲೇ ಸಿದ್ಧತೆಗಳನ್ನು ನಡೆಸಿಕೊಳ್ಳಲಾಗುತ್ತಿದೆ. ಆದರೆ ಇದಕ್ಕೆ ಹಲವು ರಾಜ್ಯಗಳ ವಿದ್ಯಾರ್ಥಿಗಳಿಂದ ವಿರೋಧs ವ್ಯಕತವಾಗುತ್ತಿದ್ದು, ಪರೀಕ್ಷೆ ಮುಂದೂಡಿಕೆಗೆ ಒತ್ತಡ ಹೆಚ್ಚಾಗುತ್ತಿದೆ. ಆದರೆ ನಿಗಧಿತ ಸಮಯದಲ್ಲೇ ಪರೀಕ್ಷೆ ನಡೆಸಬೇಕೆಂದು ಸುಪ್ರಿಂ ಕೋರ್ಟ್ ನಿಂದ ಈಗಾಗಲೇ ಸುಗ್ರೀವಾಜ್ಞೆ ಆಗಿದೆ. ಆದರು ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಪರೀಕ್ಷೆ ಮುಂದೂಡವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಇದರ ಬೆನ್ನಲ್ಲೇ ಇದೀಗ ಒಡಿಶಾದ ಸಿಎಂ ನವೀನ್ ಪಟ್ನಾಯಕ್ ಅವರು ಸಹ ಪರೀಕ್ಷೆ ಮುಂದೂಡಿಕೆಗೆ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಮನವಿ ಮಾಡಿದ್ದಾರೆ.
ಜೆಇಇ ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 6 ರವರೆಗೆ ನಡೆಯಲಿದ್ದು, ನೀಟ್ ಪರೀಕ್ಷೆ ಸೆಪ್ಟೆಂಬರ್ 13 ರಂದು ನಡೆಯಲಿದೆ. ಎನ್ಟಿಎ ರಾಜ್ಯದ ನಗರಗಳಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ಹಂಚಿರುವುದರಿಂದ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಮತ್ತು ಅಲ್ಲಿಗೆ ತಲುಪಲು ಕಷ್ಟವಾಗುತ್ತದೆ. ‘ಈ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗುವುದು ಅಸುರಕ್ಷಿತ ಮತ್ತು ಅಪಾಯಕಾರಿ ಎಂದು ಪಟ್ನಾಯಕ್ ತಿಳಿಸಿದ್ದಾರೆ. ಒಡಿಶಾದಲ್ಲಿ ಹೆಚ್ಚಾಗಿ ಬುಡಕಟ್ಟು ಸಮುದಾಯಗಳಿದ್ದು ಮತ್ತು ನಗರ ಕೇಂದ್ರಗಳಿಂದ ದೂರದ ಪ್ರದೇಶಗಳಲ್ಲಿವೆ. ಅಂತಹ ಪ್ರದೇಶಗಳಲ್ಲಿ ವಾಸಿಸುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿರಬಹುದು. ಕೋವಿಡ್ 19ನ ಈ ವಿಷಮ ಸ್ಥಿತಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಬಹಳ ದೂರ ಪ್ರಯಾಣಿಸಬೇಕಾಗಿರುವುದು ಅಪಾಯಕಾರಿ ಎಂದಿದ್ದಾರೆ.








