ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸದ್ಯ ಕೋಮಾಗೆ ಜಾರಿದ್ದಾರೆ. ಸೇನೆ ಸಂಶೋಧನಾ ಮತ್ತು ರೆಫರಲ್ ಆಸ್ಪತ್ರೆ ವೈದ್ಯಕೀಯ ಆಸ್ಪತ್ರೆಯ ಮೂಲಗಳ ಪ್ರಕಾರ ಪ್ರಣಬ್ ಮುಖರ್ಜಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
![]()
ಈ ತಿಂಗಳ ಆರಂಭದಲ್ಲಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದಕ್ಕೂ ಮೊದಲು ಕೊರೋನಾ ಪರೀಕ್ಷೆ ನಡೆಸಿದಾಗ ಅವರಿಗೆ ಕೊರೋನಾ ಇರುವುದು ದೃಢವಾಗಿತ್ತು. ಸದ್ಯ ಕೋಮಾಗೆ ಜಾರಿರುವ ಪ್ರಣಬ್ ಅವರಿಗೆ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.









