ನವದೆಹಲಿ: ಕೊರೊನಾ ಹಾವಳಿಯ ನಡುವೆಯೂ JEE ಮತ್ತು NEET ಪರೀಕ್ಷೆಗಳನ್ನು ಆಯೋಜಿಸಲು ಈಗಾಗಲೇ ಕೇಂದ್ರ ಸರ್ಕಾರ ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದೆ. ಆದರೆ ಇದಕ್ಕೆ ಹಲವು ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿದ್ದಾರೆ. ಇದೇ ವಿಚಾರವಾಗಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಸಭೆ ನಡೆಸಿ ಒಗ್ಗಟ್ಟಿನ ಹೋರಾಟ ನಡೆಸುವಂತೆ ಕರೆ ನೀಡಿದ್ದಾರೆ.
ಇನ್ನೂ ಈ ಆನ್ ಲೈನ್ ಸಭೆಯಲ್ಲಿ ಹಲವು ರಾಜ್ಯಗಳ ಸಿಎಂಗಳು ಬಾಗವಹಿಸಿದ್ದರು. ಪ್ರಮುಖವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಇತರೇ ರಾಜ್ಯಗಳ ಸಿಎಂ ಗಳು ಭಾಗವಹಿಸಿದ್ದರು. ಈ ವೇಳೆ ಕೇಂದ್ರದ ಈ ನಡೆ ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವನ್ನು ನೀಡುವಂತಿದೆ. ಪ್ರಜಾಪ್ರಭುತ್ವದಲ್ಲಿ ಹಲವು ದೌರ್ಜನ್ಯಗಳನ್ನು ನಾನು ನೋಡಿರಲಿಲ್ಲ. ನಾವು ಸುಪ್ರೀಂಕೋರ್ಟ್‌ಗೆ ಹೋಗೋಣ. ಅಲ್ಲಿ ಈ ವಿಚಾರದ ಬಗ್ಗೆ ಮಾತನಾಡೋಣ. ಈಗಿನ ಪರಿಸ್ಥಿತಿ ಬಹಳ ಗಂಭೀರವಾಗಿದೆ. ನಾವು ಮಕ್ಕಳಿಗಾಗಿ ೀ ಕ್ರಮ ಕೈಗೊಳ್ಳಲೇ ಬೇಕಾಗಿದೆ ಎಂದಿದ್ದಾರೆ.