ಹಾವೇರಿ: ಅರ್ಹ ರೈತರು ಸರಿಯಾದ ದಾಖಲೆ ನೀಡಿದರೆ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ದೂದಿಹಳ್ಳಿ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲೆಯ ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿನ 88 ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರನ್ನು ಎತ್ತಿ ಸರ್ವಜ್ಞ ಕೆರೆ ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರೆವೆರಿಸಿ ಅವರು ಮಾತನಾಡಿದರು. ಸಾಲ ಮನ್ನಾ ಬಗ್ಗೆ ಅನುಮಾನ ಬೇಡ, ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಅರ್ಹತಾ ಪತ್ರಗಳ ಪರಿಶೀಲನೆ ಮಾಡಲಾಗುತ್ತಿದೆ. ಅರ್ಹ ರೈತರು ಸೂಕ್ತ ದಾಖಲೆ ನೀಡಿದರೆ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದಾರೆ. ಇದಲ್ಲದೆ ರಾಜ್ಯ ಬಜೆಟ್‌ನಲ್ಲಿ ರೈತರ ಸಮುದಾಯಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ 5 ಸಾವಿರ ಕೋಟಿಯಲ್ಲಿ ನದಿ ನೀರನ್ನು ಎತ್ತಿ ಕೆರೆ ತುಂಬಿಸುವ ಏತ ನೀರಾವರಿ ಯೋಜನೆಗೆ ತೆಗೆದಿರಿಸುವ ಮೂಲಕ ಬಾಕಿ ಉಳಿದಿರುವ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!
ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...








