ಬೆಂಗಳೂರು: ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಇಂದಿನಿಂದ ಮ್ಯಾಜಿಸ್ಟ್ರೇಟ್ ತನಿಖೆ ಆರಂಭವಾಗಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಸರ್ಕಾರ ಗಲಭೆ ಪ್ರಕರಣದ ತನಿಖೆಗೆ ಆದೇಶ ನೀಡಿತ್ತು. ಈ ಸಂಬಂಧ ಸರ್ಕಾರದ ಆದೇಶ ಹೊರಬಿದ್ದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿವಮೂರ್ತಿ ತನಿಖೆ ಆರಂಭಿಸಿದ್ದಾರೆ.
ಗಲಭೆ ನಡೆದ ಡಿ.ಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಡಿಸಿ ಶಿವಮೂರ್ತಿ, ಎಸಿಪಿ ಹಾಗೂ ಠಾಣೆಯ ಇನ್ಸ್ಪೆಕ್ಟರ್ಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. ಜತೆಗೆ ಪ್ರಕರಣದ ಪ್ರತಿಯೊಂದು ಫೈಲನ್ನು ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಕಂದಾಯ ಅಧಿಕಾರಿಗಳು ಸಾಥ್ ನೀಡಿದ್ದಾರೆ.
ಗಲಭೆಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದ ಗೈಡ್ಲೈನ್ಸ್ ಪ್ರಕಾರ ತನಿಖೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆಗಸ್ಟ್ 11ರ ರಾತ್ರಿ ನವೀನ್ ಎಂಬಾತ ಹಾಕಿದ್ದ ಫೇಸ್ಬುಕ್ ಪೋಸ್ಟ್ ವಿರುದ್ಧ ಬೆಂಗಳೂರಿನ ಕೆ.ಜೆ ಹಳ್ಳಿ ಹಾಗೂ ಡಿ.ಜೆ ಹಳ್ಳಿಯಲ್ಲಿ ಭಾರಿ ಗಲಾಟೆ ನಡೆದಿತ್ತು. ಉದ್ರಿಕ್ತರು ಎರಡೂ ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಿದ್ದರು. ಜತೆಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೂ ದಾಳಿ ಮಾಡಿ ಬೆಂಕಿ ಹಚ್ಚಿದ್ದರು. ಗಲಭೆ ವೇಳೆ ನಡೆದ ಪೊಲೀಸರ ಗೋಲಿಬಾರ್ನಲ್ಲಿ 3 ಮಂದಿ ಮೃತಪಟ್ಟಿದ್ದರು.
ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...








