ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಬೆಳಗಾವಿ ಚಲೋ ಆರಂಭಿಸಿವೆ.
ಕರ್ನಾಟಕ ರಣಧೀರ ಪಡೆ, ಹಾಲುಮತ ಸೇರಿ ರಾಯಣ್ಣ ಅಭಿಮಾನಿಗಳು ಬೆಳಗಾವಿ ಸುವರ್ಣ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಆಗಷ್ಟ್ 15ರಂದು ಪೀರನವಾಡಿಯಲ್ಲಿ ಅನುಮತಿ ಇಲ್ಲದಕ್ಕೆ ರಾಯಣ್ಣ ಮೂರ್ತಿ ಪ್ರತಿಷ್ಠಾನಗೆ ಪೆÇಲೀಸರು ಅವಕಾಶ ಕೊಟ್ಟಿರಲಿಲ್ಲ. ಪ್ರತಿಮೆ ಸ್ಥಾಪನೆಗೆ ರಾಯಣ್ಣ ಅಭಿಮಾನಿಗಳು ಹಾಗೂ ವಿವಿಧ ಸಂಘಟನೆಗಳು ಹೋರಾಟ ಉಗ್ರಗೊಳಿಸುವ ಎಚ್ಚರಿಕೆ ನೀಡಿದ್ದವು. ಇದರ ಭಾಗವಾಗಿ ಇಂದು ಬೆಳಗಾವಿ ಚಲೋ ಆರಂಭಿಸಲಾಗಿದೆ.
ಆದರೆ, ಬೆಳಗಾವಿ ಚಲೋ ನಡೆಸುತ್ತಿರುವ ರಾಯಣ್ಣ ಅಭಿಮಾನಿಗಳನ್ನು ಪೊಲೀಸರು ಮಾರ್ಗಮಧ್ಯೆ ತಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸೇರಿದಂತೆ ವಿವಿಧ ಭಾಗಗಳಿಂದ ಬರುತ್ತಿದ್ದ ಅಭಿಮಾನಿಗಳ ವಾಹನಗಳನ್ನು ತಡೆದ ಪೆÇಲೀಸರು ಬೆಳಗಾವಿ ನಗರಕ್ಕೆ ಪ್ರವೇಶಿಸದಂತೆ ತಡೆಯೊಡ್ಡಿದ್ದಾರೆ.
ಪೊಲೀಸರ ಕ್ರಮಕ್ಕೆ ರಾಯಣ್ಣ ಅಭಿಮಾನಿಗಳ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಮಧ್ಯೆ ಕುಳಿತು ಧರಣಿ ನಡೆಸುತ್ತಿದ್ದಾರೆ.
ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಮಹತ್ವದ ಸಭೆ
ರಾಯಣ್ಣ ಮೂರ್ತಿ ಪ್ರತಿಷ್ಠಾನ ವಿಚಾರವಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಬೆಳಗಾವಿ ಸಕ್ರ್ಯೂಟ್ ಹೌಸನಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ಕುರುಬ ಸಮಾಜದ ಮುಖಂಡರ ಜೊತೆ ರಮೇಶ್ ಜಾರಕಿಹೊಳಿ ಸಭೆ ಮಾಡುತ್ತಿದ್ದಾರೆ.
ಸಭೆಗೂ ಮುನ್ನ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಪೀರನವಾಡಿ ಗ್ರಾಮದ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದವನ್ನು ಬೇಗ ಬಗೆಹರಿಸಲಾಗುವುದು. ಮಾಜಿ ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಮತ್ತು ನಿರಂಜನಾಂದ ಪುರಿ ಸ್ವಾಮಿಜಿ ಜೊತೆ ಮಾತನಾಡಿ ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದಿದ್ದಾರೆ.