ಬೆಂಗಳೂರು : ಅನ್ ಲಾಕ್ ನಿಂದಾಗಿ ಹಂತ ಹಂತವಾಗಿ ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಆದ್ರೆ ಮಹಾನಗರಗಳಲ್ಲಿ ಮೆಟ್ರೋ ಸೇವೆಗೆ ಇನ್ನೂ ಅವಕಾಶ ನೀಡಿಲ್ಲ. ಏತನ್ಮಧ್ಯೆ ಅನ್ ಲಾಕ್ 4.0 ನಲ್ಲಿ ಮೆಟ್ರೋ ಸೇವೆಗೆ ಅವಕಾಶ ಮಾಡಿಕೊಡಬಹುದು ಎಂಬ ಚರ್ಚೆ ಆರಂಭವಾಗಿದೆ. ಈ ವಿಚಾರವಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿ ನೀಡಿದ್ದು, ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮೆಟ್ರೋ ಸೇವೆ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಕೋವಿಡ್ ಅನ್ ಲಾಕ್ ನಿಂದಾಗಿ ಹಂತಹಂತವಾಗಿ ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮುಂಜಾಗರೂಕತಾ ಕ್ರಮ ಕೈಗೊಂಡು ಶೀಘ್ರದಲ್ಲೇ ಮೆಟ್ರೋ ಸೇವೆ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದರು.
![]()
ಇನ್ನು ಈಗಾಗಲೇ ಸಾರಿಗೆ ಸೇವೆ ಬಹುತೇಕ ಆರಂಭವಾಗಿದ್ದು, ಅಂತರಾಜ್ಯ ಬಸ್ ಸಂಚಾರವನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಅಕ್ಟೋಬರ್ ತಿಂಗಳಲ್ಲಿ ಪದವಿ ತರಗತಿಗಳನ್ನು ಆರಂಭಿಸಲು ಚಿಂತನೆ ನಡೆಸಿದೆ ಎಂದು ಮಾಹಿತಿ ನೀಡಿದರು.









